
ಬೆಂಗಳೂರು(ಜು. 06) ಕರ್ನಾಟಕದಲ್ಲಿ ರಾಜಕೀಯ ಹೈ ಡ್ರಾಮಾ ನಡೆಯುತ್ತಿದೆ. ಶಾಸಕರು ಸರಣಿ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದಾರೆ.
ಶನಿವಾರ ಬೆಳಗ್ಗೆ ರಾಜೀನಾಮೆ ಸಲ್ಲಿಕೆಗೆ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ತೆರಳಿದ್ದಾಗ ಅಲ್ಲಿಗೆ ಆಗಮಿಸಿದ ಡಿಕೆ ಶಿವಕುಮಾರ್ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ರಾಜೀನಾಮೆ ಪತ್ರ ಹರಿದು ಹಾಕಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಡಿಕೆಶಿ ಹರಿದು ಹಾಕಿದ್ದು ರಾಜೀನಾಮೆ ಪತ್ರ ಅಲ್ಲ, ಅದು ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆಗೆ ಕೊಟ್ಟ ಸ್ವೀಕೃತಿ ಪತ್ರ ಎಂಬುದು ಗೊತ್ತಾಗಿದೆ. ಇದೀಗ ರೆಬಲ್ ಶಾಸಕರು ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಿದೆ ಎಂದು ಡಿಕೆಶಿ ಅವರ ಮೇಲೆಯೇ ದೂರು ನೀಡಲು ಮುಂದಾಗಿದ್ದಾರೆ.
ಶಾಸಕರ ಸಾಮೂಹಿಕ ರಾಜೀನಾಮೆ ಸಂಪೂರ್ಣ ಕತೆ ಇಲ್ಲಿದೆ
ಶಾಸಕರ ರಾಜೀನಾಮೆಯನ್ನು ಮಂಗಳವಾರ ಪರಿಶೀಲನೆ ಮಾಡುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಒಟ್ಟಿನಲ್ಲಿ ದೋಸ್ತಿ ಸರಕಾರಕ್ಕೆ ಶಾಸಕರ ರಾಜೀನಾಮೆ ಕಂಟಕವಾಗಿ ಪರಿಣಮಿಸಿದೆ.
ಡಿಕೆ ಶಿವಕುಮಾರ್ ಹವಾಲಾ ಹಣದ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಅವರ ಮೇಲೆ ದಾಖಲಾಗಿದ್ದ ಪ್ರಕರಣವೊಂದರ ವಜಾ ಅರ್ಜಿಯನ್ನು ಇತ್ತಿಚೇಗೆ ಜನಪ್ರತಿನಿಧಿಗಳ ನ್ಯಾಯಾಲಯ ತಳ್ಳಿಹಾಕಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.