ಕ್ಷಿಪ್ರ ಬೆಳವಣಿಗೆ : ಪಶ್ಚಿಮ ಬಂಗಾಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬದಲು

Published : Sep 22, 2018, 01:41 PM ISTUpdated : Sep 22, 2018, 01:57 PM IST
ಕ್ಷಿಪ್ರ ಬೆಳವಣಿಗೆ : ಪಶ್ಚಿಮ ಬಂಗಾಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬದಲು

ಸಾರಾಂಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಮುಖ ನಿರ್ಧಾರ ಒಂದನ್ನು ಕೈಗೊಂಡು ಪಕ್ಷದ ಸ್ಥಾನವೊಂದಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷರನ್ನು ದಿಢೀರ್ ಬದಲಾವಣೆ ಮಾಡಿದ್ದಾರೆ. 

ಕೋಲ್ಕತಾ :  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಮುಖ ನಿರ್ಧಾರ ಒಂದನ್ನು ಕೈಗೊಂಡಿದ್ದು, ಪಕ್ಷದ ಪ್ರಮುಖ ಸ್ಥಾನವೊಂದಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 

ಪಶ್ಚಿಮ ಬಂಗಾಳ  ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ಅಧಿರ್ ರಂಜನ್ ಚೌಧರಿ ಅವರನ್ನು ಕೆಳಕ್ಕಿಳಿಸಿ ಅವರ ಸ್ಥಾನಕ್ಕೆ ಸೋಮೇಂದ್ರ ನಾಥ್ ಮಿತ್ರಾ ಅವರನ್ನು ನೇಮಕ ಮಾಡಲಾಗಿದೆ. 

ಅಲ್ಲದೇ ಚೌಧರಿ ಅವರನ್ನು ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

ಆ್ಯಂಟಿ ಮಮತಾ ಬ್ಯಾನರ್ಜಿ ದೃಷ್ಟಿಕೋನದಲ್ಲಿ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಿರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

2019ಚುನಾವಣಾ ದೃಷ್ಟಿಕೋನವನ್ನು ಇರಸಿಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಚೌಧರಿ ಅವರು ತಮಗೆ ಈ ಬಗ್ಗೆ ಯಾವುದೇ ಮಾಹಿತಿಯನ್ನೂ ಕೂಡ ನೀಡಿರಲಿಲ್ಲ ಎಂದು ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ
25000 ಕೋಟಿ ದಲಿತರ ಹಣ ಗ್ಯಾರಂಟಿಗೆ ಬಳಕೆ: ಸಚಿವ ಎಚ್‌.ಸಿ.ಮಹದೇವಪ್ಪ