ಸಿಎಂ ಯಾರಾಗಬೇಕು ಎಂದು ಬಿಜೆಪಿ ಬಾರ್‌ನಲ್ಲಿ ನಿರ್ಧರಿಸುತ್ತೆ: ಕಾಂಗ್ರೆಸ್!

Published : Jul 09, 2019, 02:28 PM ISTUpdated : Jul 09, 2019, 07:51 PM IST
ಸಿಎಂ ಯಾರಾಗಬೇಕು ಎಂದು ಬಿಜೆಪಿ ಬಾರ್‌ನಲ್ಲಿ ನಿರ್ಧರಿಸುತ್ತೆ: ಕಾಂಗ್ರೆಸ್!

ಸಾರಾಂಶ

ತರ್ಕಕ್ಕೂ ನಿಲುಕದ ರಾಜ್ಯ ರಾಜಕಾರಣದ ಬೆಳವಣಿಗೆಗಳು| ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರಗೊಂಡ ಜಟಾಪಟಿ| ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ನಿರತರಾದ ಕಾಂಗ್ರೆಸ್-ಬಿಜೆಪಿ ನಾಯಕರು| ಸಿಎಂ ಯಾರಾಗಬೇಕು ಎಂದು ಬಿಜೆಪಿ ಬಾರ್‌ನಲ್ಲಿ ನಿರ್ಧರಿಸುತ್ತೆ ಎಂದ ಕಾಂಗ್ರೆಸ್| ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಗುಲಾಂ ನಬಿ ಆಜಾದ್|

ಬೆಂಗಳೂರು(ಜು.09): ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಬಾರ್ ಮತ್ತು ದುಬಾರಿ ರೆಸ್ಟೋರೆಂಟ್'ಗಳಲ್ಲಿ ನೇಮಿಸುತ್ತದೆ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

ಕರ್ನಾಟಕ ರಾಜಕೀಯ ವಿಪ್ಲವ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಶಾಸಕರನ್ನು ಅಪಹರಿಸುವ ಮೂಲಕ, ಖರೀದಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಬಿಜೆಪಿಯೇ ಕಾರಣ ಎಂದಿರುವ ಆಜಾದ್, ಶಾಸಕರನ್ನು ಒತ್ತಾಯಪೂರ್ವಕವಾಗಿ ಮುಂಬೈಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಉಪಸ್ಥಿತರಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

"

ರಾಜ್ಯವೊಂದರ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಬಿಜೆಪಿ ಬಾರ್ ಮತ್ತು ರೆಸ್ಟೋರೆಂಟ್'ಗಳಲ್ಲಿ ನಿರ್ಧರಿಸುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಆಜಾದ್ ಗಂಭೀರ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌