
ಬೆಂಗಳೂರು (ಸೆ.14): ರಾಹುಲ್ ಗಾಂಧಿ ಅಮೆರಿಕಾ ಹೇಳಿಕೆ ಬಿಜೆಪಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗುತ್ತಿರುವುದಕ್ಕೆ ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸದ ಕೆಪಿಸಿಸಿ ಸೋಷಿಯಲ್ ಮೀಡಿಯಾವನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.
‘ಇಂಡಿಯಾ@70: ರಿಪ್ಲೆಕ್ಷನ್ ಆನ್ ದ ಪಾತ್ ಫಾರ್ವರ್ಡ್' ಎಂಬ ವಿಷಯವಾಗಿ ತಮ್ಮ ಭಾಷಣದ ಸಂದರ್ಭದಲ್ಲಿ ಭಾರತದ ಪ್ರಜಾಪ್ರಭುತ್ವದ ಪ್ರಸ್ತುತತೆಯ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಿದ್ದರು. ಇದೇ ವೇಳೆಯಲ್ಲಿ ಭಾರತದ ಕೆಳಮನೆಯ ಒಟ್ಟು ಸಂಸದರ ಬಗ್ಗೆ ಹೇಳುವಾಗ ಯಡವಟ್ಟು ಮಾಡಿಕೊಂಡರು. 545 ಎಂದು ಹೇಳುವ ಬದಲು 546 ಎಂದು ಉಚ್ಛರಿಸಿದರು. ಈ ತಪ್ಪು ಹೇಳಿಕೆ ಸಾಮಾಜಿಕ ಮಾಧ್ಯಮ ಅದರಲ್ಲೂ ಟ್ವಿಟರ್'ನಲ್ಲಿ ವೈರಲ್ ಆಗಿದೆ. ಇದನ್ನು ಬಿಜೆಪಿ ಟ್ರೋಲ್ ಮಾಡುತ್ತಿದೆ. ಆದರೆ ಕೆಪಿಸಿಸಿ ಬಿಜೆಪಿಗೆ ಟಾಂಗ್ ಕೊಡದೇ ಮೌನ ವಹಿಸಿರುವುದಕ್ಕೆ ವೇಣುಗೋಪಾಲ್ ಗರಂ ಆಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷ ರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸೆ.16ರಂದು ವೇಣುಗೋಪಾಲ್ ಸಭೆ ಕರೆದಿದ್ದು ಕೆಪಿಸಿಸಿ ಸೋಷಿಯಲ್ ಮಿಡಿಯಾ ಗ್ರೂಪ್’ಗೆ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ. ಅಂದು ಸಂಜೆ ಬೆಂಗಳೂರು ಕಾರ್ಪೊರೇಟರುಗಳ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ವೇಣುಗೋಪಾಲ್ ಮತ್ತೆ ಸಭೆ ಕರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.