
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಕಾಂಗ್ರೆಸ್ ತನ್ನ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಸೆ. 23ರಿಂದ‘ ಮನೆ ಮನೆಗೆ ಕಾಂಗ್ರೆಸ್’ ಎಂಬ ಅಭಿಯಾನಕ್ಕೆ ಚಾಲನೆ ನೀಡುತ್ತಿದೆ.
ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರ ಮೇಶ್ವರ್, ಸೆ.23ರಿಂದ ಅಕ್ಟೋಬರ್ 15ರವರೆಗೆ ಏಕಕಾಲದಲ್ಲಿ 224 ಕ್ಷೇತ್ರಗಳಲ್ಲೂ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮ ನಡೆಸಲಾಗುವುದು.
ಸೆ.23ರಂದು ಮಹದೇವಪುರ ಕ್ಷೇತ್ರದಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಮಹದೇವಪುರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಮುಖಂಡರೆಲ್ಲಾ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಮೂಲಕ ಸರ್ಕಾರ ಜಾರಿ ಮಾಡಿರುವ ಯಶಸ್ವಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ನೇರವಾಗಿ ಮಾಹಿತಿ ತಲುಪಿಸಲಾಗುವುದು ಎಂದರು.
ಹಿಂದೆ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯ ಗಳನ್ನು ಜನರಿಗೆ ಮುಟ್ಟಿಸಲು ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಈ ವೇಳೆ ಯಶಸ್ವಿಯಾಗಿ ಸರ್ಕಾರದ ಚುಕ್ಕಾಣಿ ಹಿಡಿದು ಸಾರ್ವಜನಿಕರು ನಮ್ಮ ಮೇಲೆ ಇಟ್ಟಿದ್ದ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿದ್ದೇವೆ.
ಚುನಾವಣೆ ಪ್ರಚಾರದ ವೇಳೆ ನೀಡಿದ್ದ 165 ಭರವಸೆಗಳಲ್ಲಿ 155 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ರಾಜ್ಯದಲ್ಲಿರುವ ಪ್ರತಿಯೊಬ್ಬರನ್ನೂ ಒಂದಲ್ಲಾ ಒಂದು ಕಾರ್ಯ ಕ್ರಮದ ಫಲಾನುಭವಿ ಮಾಡಿದ್ದೇವೆ. ಈ ಸಂತೃಪ್ತಿ ಯೊಂದಿಗೆ ನಮ್ಮ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಹೋಗುತ್ತಿದ್ದೇವೆ. 224 ಕ್ಷೇತ್ರಗಳಲ್ಲಿ 54 ಸಾವಿರ ಬೂತ್‌ಗಳಿವೆ. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೂ ಭೇಟಿ ಮಾಡಿ ಸರ್ಕಾರ ಜಾರಿ ಮಾಡಿರುವ ಕಾರ್ಯಕ್ರಮ, ಚುನಾವಣೆಗೆ ಮೊದಲು ನೀಡಿದ್ದ ಭರವಸೆ ಬಗ್ಗೆ ಮಾಹಿತಿ ಪುಸ್ತಕ ಜನರಿಗೆ ನೀಡುತ್ತೇವೆ. ಅಕ್ಟೋಬರ್ 15ರಂದು ಕಾರ್ಯಕ್ರಮ ಮುಗಲಿಯಲಿದೆ. ಇದರ ಉಸ್ತುವಾರಿ ನೋಡಿಕೊಳ್ಳಲು ಪ್ರತಿ ಬೂತ್ ಮಟ್ಟದಲ್ಲಿ ಒಬ್ಬರನ್ನು ನೇಮಕ ಮಾಡಿದ್ದೇವೆಂದರು.
ರಾಜಕೀಯ ಉದ್ದೇಶಕ್ಕಾಗಿ ಐಟಿ ದಾಳಿ ಬೇಡ:
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯನ ನಿವಾಸ ಹಾಗೂ ಕಚೇರಿ ಮೇಲೆ ಐಟಿ ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಿದ್ದಾರ್ಥ ಒಬ್ಬ ಉದ್ಯಮಿಯಾಗಿದ್ದು ಯಾವ ಪಕ್ಷವನ್ನೂ ಸೇರಿಲ್ಲ. ಐಟಿ ಸ್ವತಂತ್ರ ಸಂಸ್ಥೆಯಾಗಿದ್ದು ತನ್ನ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷ ಬಿಟ್ಟಾಗ ಯಾರು ಏನು ಹೇಳಿದ್ದರು ಎಂಬುದು ಗೊತ್ತಿಲ್ಲ. ಸಿದ್ಧಾರ್ಥ ಉದ್ಯಮಿಯಾಗಿರುವುದರಿಂದ ದಾಳಿ ಆಗಿರಬಹುದು. ಆದರೆ ಇಂತಹ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಬಾರದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.