
ಬೆಂಗಳೂರು[ಜೂ. 17] ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಆರ್. ರೋಶನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ. ಶಿವಾಜಿನಗರ ಶಾಸಕರಾದ ಬೇಗ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಕಾರಣ ಒಡ್ಡಿ ಅಮಾನತು ಮಾಡಲಾಗಿದೆ.
ರೋಶನ್ ಬೇಗ್ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರು.
ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿಯೂ ರೋಶನ್ ಹೆಸರು ಕೇಳಿಬಂದಿತ್ತು. ಇದಕ್ಕೂ ಮುನ್ನ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ಶಾಸಕ ಕಂಪ್ಲಿ ಗಣೇಶ್ ಅವರನರನು ಕಾಂಗ್ರೆಸ್ ಅಮಾನತು ಮಾಡಿತ್ತು. ಆದರೆ ನಂತರ ಬದಲಾದ ರಾಜಕಾರಣದ ಬೆಳವಣಿಗೆಯಲ್ಲಿ ಗಣೇಶ್ ಅಮಾನತು ಹಿಂದಕ್ಕೆ ಪಡೆಯಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.