
ಬೆಂಗಳೂರು : ಎರಡು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆಯಾದವರಿಗೆ ನೇರವಾಗಿ ಟಿಕೆಟ್ ಖಾತರಿಗೊಳಿಸಬೇಕು ಮತ್ತು ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ಆದರೆ, ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಮಾಡಿಕೊಂಡರೆ ಆಂತರಿಕವಾಗಿಯೇ ವಿರೋಧಿ ಅಲೆ ಸೃಷ್ಟಿಯಾಗುತ್ತದೆ. ಇದು ಆಗದಂತೆ ಎಚ್ಚರಿಕೆ ವಹಿಸಬೇಕು. ಹಾಲಿ ಶಾಸಕರು ಗೆಲ್ಲಲಿ ಅಥವಾ ಸೋಲಲಿ, ಅವರಿಗೆ ಟಿಕೆಟ್ ನೀಡಲೇಬೇಕಾಗುತ್ತದೆ. ಒಂದು ವೇಳೆ ಇವರು ಬಂಡಾಯವೆದ್ದರೆ ಪಕ್ಷ ಗೆಲ್ಲುವ ಸಾಧ್ಯತೆಯೂ ಇಲ್ಲವಾಗುತ್ತದೆ ಎಂದು ಸಲಹೆ ನೀಡಿದರು ಎನ್ನಲಾಗಿದೆ.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಾ
ಜಿ.ಪರಮೇಶ್ವರ್ ಅವರು, ಕಳೆದ ಬಾರಿ ಗೆದ್ದ ಶಾಸಕರ ಜತೆಗೆ, ಗೆಲ್ಲುವ ಹಂತದಲ್ಲಿ ಎಡವಿದವರಿಗೂ ಒಂದು ಅವಕಾಶ ದೊರೆಯಬೇಕು ಎಂದು ವಾದಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸದ್ಯ ಪಕ್ಷದ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ವಿಚಾರದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದಾಗ ಸಹಮತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಮಾಡೋಣ ಎಂದು ಚರ್ಚೆಗೆ ತೆರೆ ಎಳೆದರು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.