
ನವದೆಹಲಿ: ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ ವಿಧನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಗುವುದು.
ನಮ್ಮ ಬಳಿ ಮುಖ್ಯಮಂತ್ರಿ ಇಲ್ಲ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ. ಯುವ ಮುಖಂಡ ಸಚಿನ್ ಪೈಲಟ್ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದು, ಅವರನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಲಿದೆ ಎಂದು ಹೇಳಲಾಗಿತ್ತು. ಆದರೆ ಇದು ಇತರ ಗುಂಪುಗಳ ಮುನಿಸಿಗೆ ಕಾರಣ ಆಗಬಾರದೆಂದು ತಟಸ್ಥ ಕ್ರಮಕ್ಕೆ ಕಾಂಗ್ರೆಸ್ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.