AICC ಅಧ್ಯಕ್ಷರ ಆಯ್ಕೆಗೆ ಸೂತ್ರ, ರಾಹುಲ್ ಜಾಗಕ್ಕೆ ಯಾರು ಫಿಕ್ಸ್?

Published : Aug 04, 2019, 11:41 PM ISTUpdated : Aug 04, 2019, 11:47 PM IST
AICC ಅಧ್ಯಕ್ಷರ ಆಯ್ಕೆಗೆ ಸೂತ್ರ, ರಾಹುಲ್ ಜಾಗಕ್ಕೆ ಯಾರು ಫಿಕ್ಸ್?

ಸಾರಾಂಶ

ಕಾಂಗ್ರೆಸ್ ಗೆ ಹೊಸ ಸಾರಥಿ ಆಯ್ಕೆ ಮಾಡುವತ್ತ ಪ್ರಕ್ರಿಯೆ ಜೋರಾಗುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ರಾಹುಲ್ ಗಾಂಧಿ ಸ್ಥಾನ ತೊರೆದಿದ್ದರು. ಅವರ ಜಾಗಕ್ಕೆ ಯಾರು? ಎಂಬುದನ್ನು ಈ ಸಭೆ ನಿರ್ಧಾರ ಮಾಡಲಿದೆ.

ನವದೆಹಲಿ[ಆ. 04]  ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಯಾರನ್ನು ಆಯ್ಕೆ ಮಾಡಬೇಕು ಎಂದು ಚರ್ಚಿಸಲು ಆಗಸ್ಟ್  10 ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್‌ ಕಮಿಟಿಯ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಗಸ್ಟ್ 10ರಂದು ಬೆಳಗ್ಗೆ 11 ಗಂಟೆಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಆಪ್ತರೆಲ್ಲಾ ಸರಣಿಯಾಗಿ ಹೊರಕ್ಕೆ: ರಾಹುಲ್ ಟೀಂ ಆಲೌಟ್?

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡು ದಿನಗಳ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೊದಲಿಗೆ ರಾಹುಲ್ ರಾಜೀನಾಮೆ ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬ ಮಾತು ಕೇಳಿಬಂದಿದ್ದರೂ ನಂತರ ಬೇರೆ ಆಯ್ಕೆಯ ಹುಡುಕಾಟ ಆರಂಭವಾಗಿತ್ತು.

ಯಾರಾಗಬಹುದು? ಪ್ರಿಯಾಂಕಾ ವಾದ್ರಾ ಅವರ ಹೆಸರು ರೇಸ್ ನಲ್ಲಿ ಕೇಳಿ ಬಂದಿತ್ತು. ಮಲ್ಲಿಕಾರ್ಜುನ ಖರ್ಗೆ, ಎ.ಕೆ.ಆಂಟನಿ, ಸುಶೀಲ್ ಕುಮಾರ್ ಶಿಂಧೆ, ಅಶೋಕ್ ಗೆಹ್ಲೋಟ್, ಗುಲಾಂನಬಿ ಆಜಾದ್, ಶಶಿ ತರೂರ್ ಆಯ್ಕೆ ಬಗ್ಗೆಯೂ ಪಕ್ಷದ ವಲಯದಲ್ಲಿ ಆಸಕ್ತಿ ಇತ್ತು.  ಹಂಗಾಮಿ ಅಧ್ಯಕ್ಷರನ್ನು ನೇಮಿಸಿ, ಪ್ರಮುಖ ನಿರ್ಧಾರ ಕೈಗೊಳ್ಳಲು ಹಿರಿಯ ನಾಯಕರ ಸಮಿತಿ ರಚಿಸುವ ಪ್ರಸ್ತಾಪವೂ ಕಾಂಗ್ರೆಸ್ ವರಿಷ್ಠರ ಮುಂದೆ ಇತ್ತು.  ಸಚಿನ್ ಪೈಲಟ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಪ್ರಸ್ತಾವ ಬಂದಿತ್ತು. ಇದೀಗ ಅಂತಿಮವಾಗಿ ಸಭೆ ಸೇರಿ ತೀರ್ಮಾನ ತೆಗೆದುಕೊಳ್ಳುವತ್ತ ಹೆಜ್ಜೆ  ಇಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ