
ಜೈಪುರ[ಸೆ.18]: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನ ವಿಧಾನಸಭೆಯ ಎಲ್ಲಾ 6 ಬಿಎಸ್‌ಪಿ ಶಾಸಕರು ಮಂಗಳವಾರ ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಬಿಎಸ್‌ಪಿ ಶಾಸಕರು ಹೇಳಿದ್ದಾರೆ.
ಆದರೆ ಶಾಸಕರ ಪಕ್ಷಾಂತರದ ಬಗ್ಗೆ ಕಿಡಿಕಾರಿರುವ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ, ಕಾಂಗ್ರೆಸ್ ನಂಬಿಕೆ ದ್ರೋಹಿ ಪಕ್ಷ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಬಿಎಸ್‌ಪಿ ಶಾಸಕರು ಬೇಷರತ್ ಬಾಹ್ಯ ಬೆಂಬಲ ನೀಡಿದ್ದರು. ಆದರೂ, ಶಾಸಕರನ್ನು ಕಾಂಗ್ರೆಸ್ ಖರೀದಿ ಮಾಡಿದೆ. ಈ ಮೂಲಕ ನಂಬಿಕೆ ದ್ರೋಹ ಎಸಗಿದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ವಿರೋಧ ಪಕ್ಷಗಳ ಜತೆ ಸೆಣಸಾಡದೇ ಬೆಂಬಲಕ್ಕೆ ನಿಂತ ಪಕ್ಷಗಳಿಗೆ ಮೋಸ ಮಾಡುತ್ತಿದೆ. ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಗಳಿದ ವರ್ಗಗಳ ವಿರೋಧಿ ಪಕ್ಷ ಎಂಬುದು ಮತ್ತೊಮ್ಮೆ ರುಜುವಾತಾಗಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.