
ನವದೆಹಲಿ: ಕೇಂದ್ರ ಸರ್ಕಾರವು ಹಜ್ ಸಬ್ಸಿಡಿಯನ್ನು ರದ್ದುಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ಮುಖಂಡ ಗುಲಾಮ್ ನಬೀ ಆಝಾದ್ ಸ್ವಾಗತಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿಗದಿಪಡಿಸಿದ ದಿನಾಂಕದ ನಾಲ್ಕು ವರ್ಷಗಳ ಮುಂಚೆಯೇ ಕೇಂದ್ರವು ಈ ಕ್ರಮ ಕೈಗೊಂಡಿದೆ. ನಮಗ್ಯಾವ ಅಭ್ಯಂತರವಿಲ್ಲ. ಸುಪ್ರೀಂ ತೀರ್ಪಿನ ಒಂದಂಶವನ್ನು ಸರ್ಕಾರ ಜಾರಿಗೊಳಿಸಿದೆ, 2ನೇ ಅಂಶವನ್ನು ಕೂಡಾ ಜಾರಿಗೊಳಿಸಬೇಕು, ಎಂದು ಅಝಾದ್ ಹೇಳಿದ್ದಾರೆ.
ಒಂದು ವಿಷಯವಿಲ್ಲಿ ಬಹಳ ಸ್ಪಷ್ಟವಾಗಿದೆ. ಸಬ್ಸಿಡಿಯಿಂದ ವಿಮಾನಯಾನ ಸಂಸ್ಥೆಗಳಿಗೆ ಲಾಭವಾಗಿದೆಯೇ ಹೊರತು ಹಜ್ ಯಾತ್ರಿಗಳಿಗಲ್ಲ, ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮುಸ್ಲಿಮರ ಹಜ್ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ.
ಈ ನಿರ್ಧಾರವನ್ನು ಇಂದು ಪ್ರಕಟಿಸಿರುವ ಅಲ್ಪಸಂಖ್ಯಾತ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಅಲ್ಪಸಂಖ್ಯಾತ ಮಹಿಳೆಯರ ಶ್ರೇಯೋಭಿವೃದ್ದಿಗೆ ಅದನ್ನು ಬಳಸಿಕೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.
ಈ ವರ್ಷದಿಂದಲೇ ಹಜ್ ಯಾತ್ರೆಗೆ ಈ ನಿರ್ಧಾರವು ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.