ಮುಂದಿನ ಚುನಾವಣೆಯಲ್ಲಿ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

Published : Nov 19, 2017, 10:35 AM ISTUpdated : Apr 11, 2018, 01:02 PM IST
ಮುಂದಿನ ಚುನಾವಣೆಯಲ್ಲಿ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಸಾರಾಂಶ

ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮೂವತ್ತೈದು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು

ಕಡೂರು(ನ.19): ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮೂವತ್ತೈದು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಶನಿವಾರ ಸಂಜೆ ತಾಲೂಕಿನ ಕಲ್ಕೆರೆ ಗೊಲ್ಲರಹಟ್ಟಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ತೆರಳುವ ಮುನ್ನ ಪಟ್ಟಣದ ದಿ. ಮಾಜಿ ಶಾಸಕ ಕೆ.ಆರ್. ಹೊನ್ನಪ್ಪ ಅವರ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದೇಶಾದ್ಯಂತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 100ನೇ ವರ್ಷದ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೌರ್ಜನ್ಯಕ್ಕೆ ಒಳಗಾದ ಹಾಗೂ ಶೋಷಿತ ಸಮುದಾಯಗಳ ಮಹಿಳೆಯರ ಮನೆಗಳಲ್ಲಿ ಏಕಕಾಲದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುತ್ತಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆ ಇಂದಿರಾಜೀ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕಡೂರು ತಾಲೂಕಿನ ಕಲ್ಕೆರೆ ಗೊಲ್ಲರಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ. ವಾಸ್ತವ್ಯದ ಮೂಲಕ ಹಿಂದುಳಿದ ಗೊಲ್ಲ ಸಮುದಾಯದಲ್ಲಿ ಇರುವ ಮೌಢ್ಯಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ಪ್ರಥಮ ಬಾರಿಗೆ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರವು ಶೇ.50ರಷ್ಟು ಮೀಸಲಾತಿ ಜಾರಿಗೆ ತಂದಿತು. ನಮ್ಮ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯಕರ ಸಬಲೀಕರಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಸುಮಾರು 35 ಕ್ಷೇತ್ರಗಳಲ್ಲಿ ಪಕ್ಷದ ಮಹಿಳೆಯರಿಗೆ ಟಿಕೆಟ್ ನೀಡಬೇಕು ಎಂದು ಕೋರಲಾಗಿದೆ ಎಂದರು.

ಇದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಸುಮಾರು ನಾಲ್ವರು ಮಹಿಳೆಯರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.ನಾನೂ ಕೂಡ ಹುಬ್ಬಳ್ಳಿ ಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಪುರುಷರಿಗೆ ಸಮಾನವಾಗಿ ಮಹಿಳೆಯರು ಕೂಡ ರಾಜಕೀಯ ಕ್ಷೇತ್ರದಲ್ಲೂ ಸಾಧನೆಮಾಡಿದ್ದು, ಬರಲಿರುವ ಚುನಾವಣೆಯಲ್ಲೂ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಗೆಲವು ಸಾಧಿಸಲಿದ್ದಾರೆ ಎಂದರು. ನುಡಿದಂತೆ ನಡೆದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರು ಸ್ವಾವಲಂಬಿಗಳಾಬೇಕು ಎಂಬ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನುಜಾರಿಗೆ ತಂದಿದೆ. ರಾಜ್ಯ ಮಹಿಳಾ ಕಾಂಗ್ರೆಸ್‌ನಿಂದ ಪ್ರಚಾರದ ಮೂಲಕ ಜನರಿಗೆ ಸರ್ಕಾರದ ಸಾಧನೆಗಳನ್ನು ತಿಳಿಸಲಾಗುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ರಮಕ್ಕೆ ಅವಕಾಶವೇ ಇಲ್ಲ! ಕೆಇಎ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು: ಹೇಗಿದೆ ಗೊತ್ತಾ ಇಂದಿನ ಸಿದ್ಧತೆ?
ಬೆಂಗಳೂರು : ನಗರದ 35 ರಸ್ತೆಗಳಲ್ಲಿ ಇನ್ನು ಪೇ ಆ್ಯಂಡ್‌ ಪಾರ್ಕ್‌