
ನವದೆಹಲಿ[ಅ.07]: ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ಟೀಕಾಪ್ರಹಾರ ಮುಂದುವರೆಸಿರುವ ಮುಂಬೈ ಮಹಾನಗರ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಸಂಜಯ್ ನಿರುಪಮ್, ಮಹಾರಾಷ್ಟ್ರ ಮಾತ್ರವಲ್ಲ ಹರಾರಯಣದಲ್ಲೂ ಕಾಂಗ್ರೆಸ್ ಸೋಲು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಆಘಾತ: 'ಕೈ' ತೊರೆದ ಮಾಜಿ ರಾಜ್ಯಾಧ್ಯಕ್ಷ
ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ನಿರುಪಮ್, ‘ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ, ಜ್ಯೋತಿರಾಧಿತ್ಯ ಸಿಂಧಿಯಾ ಮೊದಲಾದ ನಾಯಕರನ್ನು ಎಐಸಿಸಿಯಿಂದ ಹೊರಹಾಕದ ಹೊರತೂ, ಪಕ್ಷಕ್ಕೆ ಉಳಿಗಾಲವಿಲ್ಲ’ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ಪಕ್ಷದ ಹಿತಾಸಕ್ತಿಗಾಗಿ ಹರಾರಯಣ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪಕ್ಷದ ವಿರುದ್ಧವೇ ಬಂಡಾಯ ಸಾರಿದ್ದ ತನ್ವರ್ ಶನಿವಾರವಷ್ಟೇ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಜೊತೆಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಿಷ್ಠೆ ಹೊಂದಿದ ಯುವ ನಾಯಕರನ್ನು ಪಕ್ಷದಿಂದ ಹೊರಹಾಕುವ ಸಂಚು ಆಂತರಿಕ ವಲಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತನ್ವರ್ ದೂರಿದ್ದರು.
ಕಾಂಗ್ರೆಸ್‌ನಲ್ಲಿ ಸೋನಿಯಾ ವರ್ಸಸ್ ರಾಹುಲ್?
‘ಕೆಲವು ಲಾಬಿಕೋರ ಭಟ್ಟಂಗಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಈ ಕುರಿತಾದ ತನ್ನ ಅಸಮಾಧಾನವನ್ನು ಹಿರಿಯ ನಾಯಕರ ಗಮನಕ್ಕೆ ತಂದಿದ್ದೇನೆ. ಆದಾಗ್ಯೂ, ಈ ಕುರಿತು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ಹಿಂದೆ ಪಕ್ಷದ ಟಿಕೆಟ್ ಭರವಸೆ ನೀಡಿದ್ದಾಗ್ಯೂ, ಕಾಂಗ್ರೆಸ್ ಹೈಕಮಾಂಡ್ 20 ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಿದೆ. ಅಲ್ಲದೆ, ಈ ಬಾರಿಯ ಮಹಾರಾಷ್ಟ್ರ ಮತ್ತು ಹರಾರಯಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು ಖಚಿತ’ ಎಂದು ಸಂಜಯ್ ನಿರುಪಮ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.