
ತುಮಕೂರು (ಜ.29): ಸಕ್ರಿಯ ರಾಜಕಾರಣಕ್ಕೆ ಧಿಡೀರ್ ರಾಜೀನಾಮೆ ನೀಡಿದ ಎಸ್.ಎಂ.ಕೃಷ್ಣರ ನಿರ್ಧಾರಕ್ಕೆ, ರಾಜಕೀಯ ಮುತ್ಸದ್ಧಿಗಳು ಪ್ರತಿಕ್ರಿಯಿಸಿದ್ದು, ಎಸ್.ಎಂ. ಕೃಷ್ಣ ಅನುಭವಿ ರಾಜಕಾರಣಿ. ಹೈಕಮಾಂಡ್ ಅವರ ಮನವೊಲಿಕೆ ಕೆಲಸ ಮಾಡುತ್ತದೆ. ಕೃಷ್ಣ ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಲಘುವಾಗಿ ಮಾತನಾಡುವುದಿಲ್ಲ ಎಂದು ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.
ಸುತ್ತೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ..ಕೃಷ್ಣ ಅವರ ಅನುಭವವನ್ನು ಪಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇಳಿವಯಸ್ಸಿನಲ್ಲಿ ಕೃಷ್ಣರನ್ನು ಈ ರೀತಿ ನಡೆಸಿಕೊಂಡಿದ್ದು ಸರಿಯಲ್ಲ. ಕೃಷ್ಣರ ರಾಜಿನಾಮೆಯಿಂದ ಕಾಂಗ್ರೆಸ್’ಗೆ ಭಾರೀ ನಷ್ಟವಾಗುತ್ತದೆ. ಅಗತ್ಯ ಬಿದ್ದರೆ ಕೃಷ್ಣರ ಮಾರ್ಗದರ್ಶನ ಪಡೆಯುತ್ತೇನೆ. ಕೃಷ್ಣರ ರಾಜಿನಾಮೆಯಿಂದ ರಾಜಕೀಯದಲ್ಲಿ ಬದಲಾವಣೆ ಕೂಡ ಆಗಲಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.