
ಮಂಡಸೌರ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 10 ದಿವಸದಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ರಾಜ್ಯದ ಮಂಡಸೌರ್‌ನಲ್ಲಿ ಕಳೆದ ವರ್ಷ ಜೂನ್ 6ರಂದು ನಡೆದ ರೈತ ಪ್ರತಿಭಟನೆ ವೇಳೆ ಗೋಲಿಬಾರ್ ಸಂಭವಿಸಿ 6 ರೈತರು ಪ್ರಾಣ ಕಳೆದುಕೊಂಡಿದ್ದರು. ಇದರ ಮೊದಲ ವರ್ಷಾಚರಣೆ ನಿಮಿತ್ತ ಇಲ್ಲಿ ಬೃಹತ್ ರೈತ ರಾರಯಲಿ ಉದ್ದೇಶಿಸಿ ಮಾತನಾಡಿದ ರಾಹುಲ್, ‘ರಾಜ್ಯದ ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಇಲ್ಲಿಯೇ ಕುಳಿತುಕೊಂಡಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು ಎಂದರೆ 10 ದಿವಸದಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು. ಇದು ಖಚಿತ. 11ನೇ ದಿನವನ್ನೂ ನಾನು ತೆಗೆದುಕೊಳ್ಳುವುದಿಲ್ಲ’ ಎಂದು ಪ್ರಕಟಿಸಿದರು. ಕಾಂಗ್ರೆಸ್ ಆಳ್ವಿಕೆಯ ಪಂಜಾಬ್ ಹಾಗೂ ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ರಾಹುಲ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.