
ರಾಯಚೂರು[ಜೂ.17]: ಜಿಲ್ಲೆಯ ದೇವದುರ್ಗ ತಾಲ್ಲೂಕು ಕ್ಯಾದಿಗೇರಾ ಜಿ.ಪಂ. ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಕೈ ಅಭ್ಯರ್ಥಿ ಸಂದೀಪ ನಾಯಕ ನಾಗೋಲಿ 2,353 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ನಾಯಕ ಅವರನ್ನು ಸೋಲಿಸಿದರು. ಸಂದೀಪ ನಾಯಕ ನಾಗೋಲಿ 10883 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 8,529 ಮತಗಳಿಗೆ ತೃಪ್ತಿಪಟ್ಟುಕೊಂಡರು.
ಈ ಹಿಂದೆ ಕ್ಯಾದಿಗೇರಾ ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಅಭ್ಯರ್ಥಿ ವೆಂಕಟೇಶ ಪೂಜಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್'ಗೆ ಸೇರ್ಪಡೆಯಾಗಿದ್ದರು. ಈ ಹಿನ್ನಲೆಯಲ್ಲಿ ಚುನಾವಣೆ ನಡೆದಿತ್ತು. ಜೆಡಿಎಸ್‌ನಿಂದ ಯಾವ ಅಭ್ಯರ್ಥಿಯೂ ಸ್ಪರ್ಧಿಸಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.