
ರಾಣಿಬೆನ್ನೂರು[ಜು.26]: ಕ್ಷೇತ್ರದ ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಸರ್ಕಲ್‌ಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಆರ್.ಶಂಕರ್ ಸಚಿವ ಸ್ಥಾನದ ದುರಾಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರಾಟ ನಡೆಸಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ ಎಂದರು.
ಕ್ಷೇತ್ರದ ಮತದಾರರ ಆಶೀರ್ವಾದದಿಂದ ಆಯ್ಕೆಯಾಗಿದ್ದ ಅವರಲ್ಲಿ ವೈಯಕ್ತಿಕ ಹಿತಾಸಕ್ತಿಯಿತ್ತೇ ಹೊರತು ಕ್ಷೇತ್ರದ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಲಿಲ್ಲ ಎಂದು ಈ ವೇಳೆ ಕಾರ್ಯಕರ್ತರು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.