
ಬೆಂಗಳೂರು(ಅ.05): ಬೆಂಗಳೂರಲ್ಲಿ ನಿರ್ಮಾಣ ಹಂತದಲ್ಲಿದ 5 ಅಂತಸ್ತಿನ ಕಟ್ಟಡವೊಂದು ಕುಸಿ, ಅವಶೇಷಗಳಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಸುಮಾರು 8-10 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಾರತಹಳ್ಳಿ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದ್ದು, ಕಾಮಗಾರಿ ನಡೆಯುತ್ತಿದ್ದ ವೇಳೆ 5 ಅಂತಸ್ತಿನ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಅವಶೇಷಗಳಡಿ ಸಿಲುಕಿ ಸಿಲುಕಿದ್ದ ನಾಲ್ವರು ಕಾರ್ಮಿಕರ ರಕ್ಷಣೆ ಮಾಡಲಾಗಿದ್ದು , ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಒರಿಸ್ಸಾ ಮೂಲದ ಸೆಕ್ಯೂರಿಟಿ ಗಾರ್ಡ್ ಅಶೋಕ್(40) ಮೃತ ವ್ಯಕ್ತಿ. ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು ಎನ್ನಲಾಗಿದ್ದು, ಈ ಕಟ್ಟದ ಶ್ರೀನಿವಾಸ್ ರೆಡ್ಡಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಭರದಿಂದ ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕದಳದ ಉಪನಿರ್ದೇಶಕ ಮಾರ್ಕಂಡಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.