ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಇನ್ಸ್'ಪೆಕ್ಟರ್

Published : Feb 10, 2017, 05:59 AM ISTUpdated : Apr 11, 2018, 12:38 PM IST
ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ  ಇನ್ಸ್'ಪೆಕ್ಟರ್

ಸಾರಾಂಶ

. ಈ ವೇಳೆ ಬೈಕ್ ಸವಾರರಾದ ಕಿರಣ್ ಮತ್ತು ಅರುಣ್ ಕುಮಾರ್ ಎಂಬುವವರು ಗಾಯಗೊಂಡಿದ್ದರು. ಕಣ್ಣಾರೆ ಕಂಡರೂ ಸಾರ್ವಜನಿಕರು ಗಾಯಾಳುಗಳನ್ನು ರಕ್ಷಿಸಲು ಹಿಂದೇಟು ಹಾಕಿದ್ದರು.

ಬೆಂಗಳೂರು(ಫೆ.10): ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಮಾನವೀಯತೆ ಮೆರೆದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅಪಘಾತಗೊಂಡವರನ್ನ ಪೊಲೀಸ್ ಜೀಪ್ ಮೂಲಕ ಕರೆದುಕೊಂಡು ಹೋಗಿ, ಬಾಣಸವಾಡಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಕಳೆದ ರಾತ್ರಿ ಕೆ.ಆರ್. ಪುರಂ ಬಳಿಯ ರಾಮೂರ್ತಿ ನಗರದ ಬಳಿಯಿರೋ ಹೊಯ್ಸಳ ನಗರ 8ನೇ ಕ್ರಾಸ್ ಬಳಿ ಇನೋವಾ ಹಾಗೂ ಬುಲೆಟ್ ಬೈಕ್ ನಡುವೆ ಅಪಘಾತವಾಗಿತ್ತು. ಈ ವೇಳೆ ಬೈಕ್ ಸವಾರರಾದ ಕಿರಣ್ ಮತ್ತು ಅರುಣ್ ಕುಮಾರ್ ಎಂಬುವವರು ಗಾಯಗೊಂಡಿದ್ದರು. ಕಣ್ಣಾರೆ ಕಂಡರೂ ಸಾರ್ವಜನಿಕರು ಗಾಯಾಳುಗಳನ್ನು ರಕ್ಷಿಸಲು ಹಿಂದೇಟು ಹಾಕಿದ್ದರು. ಇದೇ ಮಾರ್ಗದಲ್ಲಿ ಬಂದ ರಾಮಮೂರ್ತಿನಗರ ಪೊಲೀಸ್ ಠಾಣೆ ಇನ್ಸ್‌'ಪೆಕ್ಟರ್ ಚಂದ್ರಧರ್, ಗಾಯಾಳುಗಳ ರಕ್ಷಣೆಗೆ ಮುಂದಾದರು. ಸದ್ಯ ಅರುಣ್ ಕುಮಾರ್‌ಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ, ಕಿರಣ್ ಎಂಬುವವರಿಗೆ ಕಾಲು ಮುರಿದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಇಬ್ಬರನ್ನು ಬಾಣಸವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್ ಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನಗಳನ್ನ ವಶಕ್ಕೆ ಪಡೆಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು