ಕಾರ್ಪೋರೇಶನ್ ಬ್ಯಾಂಕ್ ಮುಖ್ಯ ಕಚೇರಿ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರ

Published : Nov 26, 2016, 01:12 PM ISTUpdated : Apr 11, 2018, 12:51 PM IST
ಕಾರ್ಪೋರೇಶನ್ ಬ್ಯಾಂಕ್ ಮುಖ್ಯ ಕಚೇರಿ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರ

ಸಾರಾಂಶ

ಈಗ ಇಲ್ಲಿನ​ ಕಾರ್ಪೋರೇಷನ್ ಬ್ಯಾಂಕ್  ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.  

ಬೆಂಗಳೂರು (ನ.26): ದೇಶದಲ್ಲೇ ಮಂಗಳೂರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವಿದೆ. ಐದು ರಾಷ್ಟ್ರೀಯ ಬ್ಯಾಂಕ್​ಗಳಿಗೆ ಜನ್ಮ ನೀಡಿರುವ ಹೆಗ್ಗಳಿಕೆಗೆ ಮಂಗಳೂರು ಪಾತ್ರವಾಗಿದೆ.

ಈಗ ಇಲ್ಲಿನ​ ಕಾರ್ಪೋರೇಷನ್ ಬ್ಯಾಂಕ್  ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.  

ಬೆಂಗಳೂರಿನ ಹೊರವಲಯದಲ್ಲಿ ಇರುವ ಹಾರ್ಡ್​ವೇರ್ ಪಾರ್ಕ್​ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆ ಭೂಮಿಯಲ್ಲಿ ಮುಖ್ಯ ಕಚೇರಿಯ ಕಟ್ಟಡ ತಲೆ ಎತ್ತುತ್ತಿದ್ದು, ಬ್ಯಾಂಕ್​ನ ಅಧ್ಯಕ್ಷರು, ಆಡಳಿತ ನಿರ್ದೇಶಕರು ಸೇರಿದಂತೆ ಪ್ರಮುಖರು ಬೆಂಗಳೂರಿನಲ್ಲೇ ಕಾರ್ಯಾ ನಿರ್ವಹಿಸಲಿದ್ದಾರೆ.

ಈಗಾಗಲೇ ಐದು ಪ್ರಮುಖ ಬ್ಯಾಂಕ್​ಗಳ ಪೈಕಿ ಕೆನರಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್​ ತನ್ನ ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಿದೆ. ಈಗ ಸ್ಥಳಾಂರಿಸೋ ಸರದಿ ಕಾರ್ಪೊರೇಷನ್ ಬ್ಯಾಂಕ್​ನದ್ದು.

ಕಾರ್ಪೊರೇಷನ್ ಬ್ಯಾಂಕ್​ನ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರು ಸ್ಮಾರ್ಟ್​ ಸಿಟಿ ಎಂಬ ಹೆಗ್ಗಳಿಕೆ ಪಾತ್ರವಾದ ಎರಡನೇ ದರ್ಜೆ ನಗರವಾಗಿದೆ. ಈ ಪ್ರದೇಶದ ಅಭಿವೃದ್ಧಿಗೆ ಇದು ದೊಡ್ಡ ಹಿನ್ನಡೆ ಎಂಬ ಅಭಿಪ್ರಾಯ ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು: ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ
ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!