
ವಿಜಯಪುರ (ಡಿ.27): ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಅವರಿಗೆ ಪಾಲಿಕೆ ಆವರಣದಲ್ಲೇ ಮುತ್ತಿಗೆ ಹಾಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಚಿವರು ಆಗಮಿಸುತ್ತಿದ್ದಂತೆ ಮುತ್ತಿಗೆ ಹಾಕಲಾಯ್ತು. ಪಾಲಿಕೆ ಕಾಂಗ್ರೆಸ್ ಸದಸ್ಯ ಮೈನೂದ್ದಿನ್ ಬೀಳಗಿ ಹಾಗೂ ಆತನ ಬೆಂಬಲಿಗರು, ಸಚಿವರನ್ನು ಕಾರಿಂದ ಇಳಿಯಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದರು. ಪಾಲಿಕೆ ಅಂಗಡಿಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡದೆ ಬೇರೆಯವರಿಗೆ ಹಂಚಿಕೆ ಮಾಡಿರುವ ಆಯುಕ್ತ ಹರ್ಷ ಶೆಟ್ಟಿ ಅವ್ರನ್ನು ಅಮಾನತು ಮಾಡಬೇಕೆಂದು ಪಟ್ಟುಹಿಡಿದರು. ಬಳಿಕ ಪಾಲಿಕೆ ಆವರಣದಲ್ಲೇ ಪ್ರತಿಭಟನೆ ಕೂಡಾ ನಡೆಸಲಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ಜೊತೆಯೂ ಮಾತಿನ ಚಕಮಕಿ ನಡೀತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.