
ಬಾಲಗಕೋಟೆ(ನ.29): ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಪತಿಯೊಬ್ಬ ಬಾಗಲಕೋಟೆ ನಗರಸಭಾ ಸದಸ್ಯನ ವಿರುದ್ಧದ ದೂರು ದಾಖಲಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಿಜೆಪಿ ನಗರಸಭಾ ಸದಸ್ಯ ಬಸವರಾಜ ವಿರುದ್ಧ ದೂರು ದಾಖಲಾಗಿದ್ದು, ನಗರದ ಅಂಗಡಿ ಮನೆತನಕ್ಕೆ ಸೇರಿದ ಪುಷ್ಪಾ ಎಂಬುವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಪುಷ್ಪಾಳ ಪತಿ ವೀರೇಶ್ ಆರೋಪಿಸಿದ್ದಾರೆ. ನವನಗರ ಪೋಲಿಸ್ ಠಾಣೆ ಪೊಲೀಸರು ಈ ಪ್ರಕರಣ ದಾಖಲಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಪುಷ್ಪಾ ತನ್ನ ಪತಿ ವೀರೇಶ ವಿರುದ್ದ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ನವನಗರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಮು೦ದುವರಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.