
ರಿಪ್ಪನ್'ಪೇಟೆ(ಜ.13): ಸುಮಾರು 1.40 ಕೋಟಿ ರು. ವೆಚ್ಚದ ಪೊಲೀಸ್ ಠಾಣಾ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವು ಜ. 14 ರಂದು ಬೆಳಗ್ಗೆ 11ಕ್ಕೆ ನಡೆಯಲಿದ್ದು, ಗೃಹಸಚಿವ ರಾಮಲಿಂಗರೆಡ್ಡಿ ಪೊಲಿಸ್ ಠಾಣೆ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಹಿಸಲಿದ್ದು, ವಿಧಾನಪರಿಷತ್ ಸಭಾಪತಿ ಡಿ.ಹೆಚ್.ಶಂಕರ್‌ಮೂರ್ತಿ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಬಿ.ಎಸ್.ಯಡಿಯೂರಪ್ಪ,ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ವಿರೋಧಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್‌ಕಾರ್ಣಿಕ್, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಾಜರಿರಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.