ಐಪಿಎಸ್‌ ಅಧಿಕಾರಿ ಮನೇಲಿ 1000 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

Published : May 13, 2019, 09:31 AM IST
ಐಪಿಎಸ್‌ ಅಧಿಕಾರಿ ಮನೇಲಿ 1000 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಸಾರಾಂಶ

ಐಪಿಎಸ್‌ ಅಧಿಕಾರಿ ಮನೇಲಿ 1000 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ| 1818 ಕೆಜಿ ತೂಕದ ಸೂಡೋಎಪಿಡ್ರಿನ್‌ ಪತ್ತೆ

ನವದೆಹಲಿ[ಮೇ.13]: ದೆಹಲಿ ಹೊರವಲಯದ ಗ್ರೇಟರ್‌ನೋಯ್ಡಾದಲ್ಲಿ ಐಪಿಎಸ್‌ ಅಧಿಕಾರಿಗೆ ಸೇರಿದ ಮನೆಯೊಂದರ ಮೇಲೆ ನಡೆಸಿದ ದಾಳಿಯಲ್ಲಿ ಭರ್ಜರಿ 1000 ಕೋಟಿ ರು. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ ನಡೆಸಿದ ವೇಳೆ 1818 ಕೆಜಿ ತೂಕದ ಸೂಡೋಎಪಿಡ್ರಿನ್‌ ಪತ್ತೆಯಾಗಿದೆ. ಇದು ಕಳೆದ ಮೂರು ವರ್ಷಗಳಲ್ಲಿ ವಿಶ್ವದ ಯಾವುದೇ ಭಾಗದಲ್ಲಿ ವಶಪಡಿಸಿಕೊಳ್ಳಲಾದ ಅತಿದೊಡ್ಡ ಪ್ರಮಾಣದ ಸೂಡೋಎಪಿಡ್ರಿನ್‌ ಎಂದು ಮಾದಕವಸುತ್ರ ನಿಯಂತ್ರಣ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ಕುರಿತ ಪ್ರಾಥಮಿಕ ವರದಿಯಲ್ಲಿ ಇಷ್ಟುದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳು ಇದ್ದ ಬಗ್ಗೆ ಮಾಹಿತಿ ಇರಲಿಲ್ಲ. ತನಿಖೆ ಹಂತದಲ್ಲಿ ಇವೆಲ್ಲವೂ ಬಯಲಿಗೆ ಬಂದಿವೆ. ಪ್ರಕರಣ ಸಂಬಂಧ ನೈಜೀರಿಯಾ ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ
ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ