
ಮಡಿಕೇರಿ : ಮಡಿಕೇರಿ ತಾಲೂಕಿನ ನಾಪೋಕ್ಲುವಿನ ಯವಕಪಾಡಿಯ ಗಿರಿಜನ ದಂಪತಿ ತಮಗಿರುವ ಮೂರು ಎಕರೆ ಜಾಗದಲ್ಲಿ ಎರಡು ಎಕರೆಯನ್ನು ನೆರೆ ಸಂತ್ರಸ್ತರಿಗೆ ನೀಡುವುದಾಗಿ ಘೋಷಿಸಿಕೊಂಡಿದ್ದಾರೆ.
ಮಲೆಕುಡಿಯರ ಪೂಣಚ್ಚ ಎಂಬವರು ಮನೆ ಕಳೆದುಕೊಂಡಿವವರಿಗೆ ನಮ್ಮ ಆಸ್ತಿಯಲ್ಲಿ ಎರಡು ಎಕರೆ ಜಾಗವನ್ನು ದಾನವಾಗಿ ನೀಡಲು ಒಪ್ಪಿಕೊಂಡಿದ್ದೇನೆ. ಇರುವ ಮೂರು ಎಕರೆಯಲ್ಲಿ ಎರಡು ಎಕರೆ ಜಾಗವನ್ನು ದಾನವಾಗಿ ನೀಡುತ್ತೇನೆ.
ಅದರಲ್ಲಿ ಯಾವುದೇ ಎರಡು ಮಾತಿಲ್ಲ. ನಮಗೆ ಹಲವು ವರ್ಷಗಳಿಂದ ಮಕ್ಕಳಿಲ್ಲ. ಯಾರಾದರು ತಂದೆ-ತಾಯಿಯನ್ನು ಕಳೆದುಕೊಂಡಿರುವವರು ಸಣ್ಣ ಮಕ್ಕಳಿದ್ದರೆ ನಾವು ದತ್ತು ತೆಗೆದುಕೊಂಡು ಅವರನ್ನು ಪ್ರಜ್ಞಾವಂತರನ್ನಾಗಿ ಮಾಡುತ್ತೇನೆ ಎಂದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದಂಪತಿಯ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.