ಸೆಲ್ಫೀಯಲ್ಲಿ ಸೆರೆಯಾದ ಸುಂದರ ಜೋಡಿಯ 'ಭಯಾನಕ ರೂಪ' ನೋಡಿದ್ರೆ ಬೆಚ್ಚಿ ಬೀಳ್ತೀರಿ!

Published : Apr 30, 2017, 11:44 AM ISTUpdated : Apr 11, 2018, 01:01 PM IST
ಸೆಲ್ಫೀಯಲ್ಲಿ ಸೆರೆಯಾದ ಸುಂದರ ಜೋಡಿಯ 'ಭಯಾನಕ ರೂಪ' ನೋಡಿದ್ರೆ ಬೆಚ್ಚಿ ಬೀಳ್ತೀರಿ!

ಸಾರಾಂಶ

ಸಾಮಾಜಿಕ ಜಾಲಾತಾಣಗಳಲ್ಲಿ ಇತ್ತೀಚೆಗೆ ಜೋಡಿಯ ಸೆಲ್ಫೀ ಒಂದು ವೈರಲ್ ಆಗುತ್ತಿದೆ. ಎಂಡೀ ಹೆಸರಿನ ಯುವಕನೊಬ್ಬ ತನ್ನ ಪ್ರಿಯತಮೆಯೊಂದಿಗೆ ತನ್ನ ಕೋಣೆಯಲ್ಲಿ ಕ್ಲಿಕ್ಕಿಸಿದ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದೇ ತಡ, ನೋಡುಗರೆಲ್ಲರೂ ದಂಗಾಗಿದ್ದಾರೆ. ಕೆಲವರು 'ಇದೇನಿದು?' ಎಂದು ಪ್ರಶ್ನಿಸಿದರೆ ಇನ್ನು ಕೆಲವರು 'ಈಕೆ ಅತ್ಯಂತ ಭಯಾನಕವಾಗಿದ್ದಾಳೆ' ಎಂದಿದ್ದಾರೆ. ಇನ್ನು ಎಂಡೀ ಈ ಫೋಟೋಗೆ 'I love my girlfriend even if she's a Gemini" ಎಂಬ ತಲೆಬರಹ ನೀಡಿದ್ದಾರೆ.

ಇಷ್ಟೆಲ್ಲಾ ಗಲು ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಇಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೀಡಿದರೆ ಆಕೆಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಮರುಕ್ಷಣವೇ ಹೀಗಿದ್ದರೆ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.

ಸದ್ಯ ಈ ಕುರಿತಾಗಿ ಜನರು ಪ್ರತಿಕ್ರಿಯೆ ನೀಡಲಾರಂಭಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಡಿಸಿ ಟಾರ್ಗೆಟ್; ಎಂಇಎಸ್ ಪರ ನಿಂತು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ ಮಹಾರಾಷ್ಟ್ರದ ಸಂಸದ ಮಾನೆ!
ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!