ಆರೆಸ್ಸೆಸ್ ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು

By Suvarna Web DeskFirst Published Nov 16, 2016, 7:53 AM IST
Highlights

2014ರಲ್ಲಿ ಚುನಾವಣಾ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುವಾಗ, ಆರೆಸ್ಸೆಸ್ ಮಹಾತ್ಮ ಗಾಂಧಿಯನ್ನು ಕೊಂದಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.

ಭೀವಂಡಿ (ಮಹಾರಾಷ್ಟ್ರ): ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸ್ಥಳೀಯ ನ್ಯಾಯಾಲಯವು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ.

ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ಸಲ್ಲಿಸಿದ್ದ ದೂರನ್ನು ಆಲಿಸಿದ ಭೀವಂಡಿ ನ್ಯಾಯಲಯವು ರಾಹುಲ್ ಗಾಂಧಿಗೆ ಜಾಮೀನು ನೀಡಿ, ಮುಂದಿನ ವಿಚಾರಣೆಯನ್ನು ಜನವರಿ 28ಕ್ಕೆ ನಿಗದಿಪಡಿಸಿದೆ.

Latest Videos

2014ರಲ್ಲಿ ಚುನಾವಣಾ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುವಾಗ ಮಹಾತ್ಮ ಗಾಂಧಿಯನ್ನು ಆರೆಸ್ಸೆಸ್ ಕೊಂದಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕಳೆದ ವರ್ಷ ಜು,8 ರಂದು ಮಾಜಿಸ್ಟ್ರೇಟ್ ಮುಂದೆ ಹಾಜರಾಗಿದ್ದರು.

click me!