ಸುನಂದಾ ಸಾವು ಪ್ರಕರಣ: ಶಶಿ ತರೂರ್ ಗೆ ಆರೋಪಿಯಾಗಿ ಸಮನ್ಸ್..!

First Published Jun 5, 2018, 4:50 PM IST
Highlights

ಮಹತ್ವದ ಬೆಳವಣಿಗೆಯೊಂದರಲ್ಲಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗುವಂತೆ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಸಮನ್ಸ್‌ನಲ್ಲಿ ಶಶಿ ತರೂರ್ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.

ನವದೆಹಲಿ(ಜೂ.5): ಮಹತ್ವದ ಬೆಳವಣಿಗೆಯೊಂದರಲ್ಲಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗುವಂತೆ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಸಮನ್ಸ್‌ನಲ್ಲಿ ಶಶಿ ತರೂರ್ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.

ಈ ಪ್ರಕರಣ ಸಂಬಂಧ ಹಲವು ಹಂತಗಳಲ್ಲಿ ವಿಚಾರಣೆ ನಡೆಸಬೇಕಿದ್ದು ಈ ಹಿನ್ನೆಲೆಯಲ್ಲಿ ಮುಂದಿನ ಜುಲೈ 7 ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನಲ್ಲಿ ತಿಳಿಸಲಾಗಿದೆ. ಪ್ರಾಸಿಕ್ಯೂಟರ್ ಮಾಡಿದ ವಾದ ಹಾಗೂ ನ್ಯಾಯಾಲಕ್ಕೆ ಸಲ್ಲಿಸಿದ್ದ ಚಾರ್ಜ್ ಶೀಟ್‍‍ಗಳನ್ನು ತಾವು ಗಮನಿಸಿದ್ದು, ಪ್ರಕರಣದಲ್ಲಿ ಶಶಿ ತರೂರ್ ಪಾತ್ರದ ಕುರಿತು ವಿಚಾರಣೆ ನಡೆಸುವುದು ಅವಶ್ಯ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ತರೂರ್ ಅವರನ್ನು ಆರೋಪಿಯನ್ನಾಗಿ ಪರಿಗಣಿಸಲಾಗಿದೆ ಮತ್ತು ಸಮನ್ಸ್ ಜಾರಿ ಮಾಡಿದೆ.

ಕಳೆದ ತಿಂಗಳು ದೆಹಲಿ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 3000 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಸಮನ್ಸ್ ಜಾರಿ ವಿರುದ್ದ್ ತರೂರ್ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

click me!