ರಾಜ್ಯದಲ್ಲಿ ನೈಟ್ ಕರ್ಫ್ಯೂ ವೀಕೆಂಡ್ ಲಾಕ್‌ಡೌನ್, ಹಾಕಿ ಇಂಡಿಯಾಗೆ ದೇಶ ಸಲಾಮ್; ಆ.6ರ ಟಾಪ್ 10 ಸುದ್ದಿ!

By Suvarna NewsFirst Published Aug 6, 2021, 4:44 PM IST
Highlights

ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್‌ಡೌನ್ ಜಾರಿಯಾಗಿದೆ. ಇತ್ತ ಹಾಕಿ ಇಂಡಿಯಾ ಮಹಿಳಾ ತಂಡದ ಹೋರಾಟಕ್ಕೆ ದೇಶವೆ ಸಲಾಮ್ ಹೇಳಿದೆ. ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಡೇಟ್ ಫಿಕ್ಸ್ ಮಾಡಲಾಗಿದೆ. ರಾಜೀವ್ ಗಾಂಧಿ ಖೇಲ್ ರತ್ನ ಬದಲು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ,  ತೆಲಂಗಾಣಗೆ ಸಿಂಧು ರಾಯಭಾರಿ ಆಗಲಿ ಎಂದ ನಾಯಕ ಸೇರಿದಂತೆ ಆಗಸ್ಟ್ 6ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

ಕೊರೋನಾ ಭೀತಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಶುರುವಾಗಿದೆ. ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ಸೋಂಕು ಕರ್ನಾಟಕದಲ್ಲಿ ಆತಂಕ ಉಂಟುಮಾಡಿದೆ.

ಶಾಲಾ-ಕಾಲೇಜು ಪ್ರಾರಂಭಕ್ಕೆ ಡೇಟ್ ಫಿಕ್ಸ್ : ಯಾವ ತರಗತಿಗೆ ಯಾವಾಗಿಂದ?

ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ಶಾಲಾ-ಕಾಲೇಜುಗಳು ಬಂದ್ ಆಗಿ 2 ವರ್ಷಗಳೇ ಆಗುತ್ತಲಿದ್ದು, ಇದೀಗ ಮತ್ತೆ ಶಾಲೆ ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. 

ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಹೆಸರು ಬದಲು, ಮೇಜರ್ ಧ್ಯಾನ್‌ ಚಂದ್‌ಗೆ ಪ್ರಧಾನಿ ಮೋದಿ ಗೌರವ

ಭಾರತೀಯ ಕ್ರೀಡಾಪಟುಗಳಿಗೆ ನೀಡಲಾಗುವ ದೇಶದ ಅತ್ಯನ್ನತ ಕ್ರೀಡಾಪ್ರಶಸ್ತಿಯಾದ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ(ಆ.06)ವಾದ ಇಂದು ಮರು ನಾಮಕರಣ ಮಾಡಿದ್ದಾರೆ. ರಾಜೀವ್‌ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಹಾಕಿ ದಿಗ್ಗಜ ಧ್ಯಾನ್ ಚಂದ್‌ ಸ್ಮರಣಾರ್ಥ, ಮೇಜರ್ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಎಂದು ಹೆಸರು ಬದಲಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕಣ್ಣೀರಾಗಿದ್ದ ಭಾರತೀಯ ಮಹಿಳಾ ಹಾಕಿ ತಂಡವನ್ನು ಸಂತೈಸಿದ ಪ್ರಧಾನಿ ಮೋದಿ

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳಾ ಹಾಕಿ ಕ್ರೀಡೆಯಲ್ಲಿ ರಾಣಿ ರಾಂಪಾಲ್ ನೇತೃತ್ವದ ಭಾರತೀಯ ಮಹಿಳಾ ಹಾಕಿ ತಂಡವು ಕೂದಲೆಳೆ ಅಂತರದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾಗಿದೆ. ಸೋಲಿನ ಬೆನ್ನಲ್ಲೇ ಕಣ್ಣೀರಾಗಿದ್ದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಲ್ಲದೇ ನಿಮ್ಮ ಸಾಧನೆಯ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ಹುರಿದುಂಬಿಸಿದ್ದಾರೆ.

ಸನ್ನಿ ಲಿಯೋನ್‌ ಮನೆಯಲ್ಲಿ ಜಿರಲೆ ಕಾಟ; 'ವಿಮೆನ್‌ vs ವೈಲ್ಡ್‌' ಕಾದಾಟ ಶುರು!

ಬಾಲಿವುಡ್ ನಟಿ ಸನ್ನಿ ಲಿಯೋನ್‌ ಹೊಸ ಮನೆಯಲ್ಲಿ ಜಿರಲೆ ಕಾಟವಂತೆ. 'ವಿಮೆನ್ vs ವೈಲ್ಡ್‌' ಶೀರ್ಷಿಕೆ ನೀಡುವ ಮೂಲಕ ಜಿರಲೆ ಹೊರ ಹಾಕಲು ಪಡುತ್ತಿರುವ ಪಚೀತಿಯ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ ಸನ್ನಿ. 

ಪೂರ್ವಾನ್ವಯ ತೆರಿಗೆ ರದ್ದತಿಗೆ ಕೇಂದ್ರದ ಮಹತ್ವದ ನಿರ್ಧಾರ

 ಕಂಪನಿಗಳ ಮೇಲೆ ಪೂರ್ವಾನ್ವಯ ತೆರಿಗೆ ಪದ್ಧತಿ ಕೊನೆಗೊಳಿಸುವಲ್ಲಿ ಕೇಂದ್ರ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅದು ಲೋಕಸಭೆಯಲ್ಲಿ ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ- 2021 ಮಂಡಿಸಿದೆ.

ಸಾನಿಯಾ ಬೇಡ, ಸಿಂಧು ತೆಲಂಗಾಣ ರಾಯಭಾರಿ ಆಗಲಿ ಎಂದ BJP ಶಾಸಕ

 ಟೆನ್ನಿಸ್ ತಾರೆ ಸಾನಿಯಾ ಮಿರ್ಝಾ ಅವರನ್ನು ತೆಗೆದು ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಪಿ.ವಿ. ಸಿಂಧು ಅವರನ್ನು ತೆಲಂಗಾಣದ ರಾಯಭಾರಿ ಮಾಡಬೇಕು ಎಂದು ಬಿಜೆಪಿ ಶಾಸಕ ಟಿ. ರಾಜಸಿಂಗ್ ಅವರು ಸಿಎಂ ಕೆ.ಚಂದ್ರಶೇಖರ್ ರಾವ್ ಅವರಿಗೆ ಒತ್ತಾಯಿಸಿದ್ದಾರೆ. 

'ಕಾಂಗ್ರೆಸ್‌ನಲ್ಲಿ ಗುಂಪುಗಳಿದ್ದು ನಡುವೆ ಭಾರೀ ವೈರತ್ವವಿದೆ'

ಕಾಂಗ್ರೆಸ್ ಒಂದು ಆಂತರಿಕ ಗೊಂದಲದ ಗೂಡಾಗಿದೆ. ಪರಮೇಶ್ವರ್, ಸಿದ್ದರಾಮಯ್ಯ ಡಿಕೆಶಿ ಎಂದು ಪಕ್ಷದಲ್ಲಿ ಬೇರೆ ಬೇರೆ ಗುಂಪುಗಳಿವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

click me!