
ಹುಬ್ಬಳ್ಳಿ: ಗೋ ಸಂರಕ್ಷಣಾ ಜಾಗೃತಿಯ ಆಂದೋಲನದ ಪರಿಣಾಮ ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ನಡೆಯುತ್ತಿದ್ದ ಗೋಹತ್ಯೆಯಲ್ಲಿ ಶೇ.50ರಷ್ಟು ಇಳಿಕೆಯಾಗಿದೆ ಎಂದು ರಾಮಚಂದ್ರಾ ಪುರ ಮಠದ ರಾಘವೇಶ್ವರ ಭಾರತೀ ಶ್ರೀ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಟ್ಕಳ ಮುಸ್ಲಿಮರ ಹೇಳಿಕೆಯನ್ನು ಆಧರಿಸಿಯೇ ನಾವು ಈ ವಿಷಯ ಹೇಳುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಅರ್ಧದಷ್ಟು ಗೋವುಗಳು ವಧಾಲಯಕ್ಕೆ ಸಿಕ್ಕಿಲ್ಲ ಎಂದು ಅವರು ಹೇಳುತ್ತಿದ್ದಾರೆ ಎಂದರು.
ಇನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಕಳೆದ ವರ್ಷ 15 ಸಾವಿರ ಗೋವುಗಳನ್ನು ಹತ್ಯೆ ಮಾಡಲಾಗಿತ್ತು. ಅಲ್ಲಿ ಈ ವರ್ಷ ಕೇವಲ ಎರಡೂವರೆ ಸಾವಿರ ಗೋವುಗಳನ್ನು ಮಾತ್ರ ಹತ್ಯೆ ಮಾಡಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.