
ಬೆಂಗಳೂರು(ಫೆ.18): ಶಾಂತಿ ನಗರ ಶಾಸಕ ಎನ್'ಎ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ನಡೆಸಿ 23 ಗಂಟೆ ಕಳೆದರೂ ಆತನನ್ನು ಬಂಧಿಸದ ಪೊಲೀಸರ ತಲೆದಂಡವಾಗಿದೆ. ಇನ್ಸ್ಪೆಕ್ಟರ್ ವಿಜಯ್ ಹಡಗಲಿ ಸಸ್ಪೆಂಡ್ ಮಾಡಿ ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.
ಶಾಸಕ ಹ್ಯಾರಿಸ್ ಮಗನನ್ನು ಹಿಡಿಯಲಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ CPI ವಿಜಯ್ ಹಡಗಲಿ ಅವರನ್ನು ಅಮಾನತು ಮಾಡಲಾಗಿದ್ದು, ಕಬ್ಬನ್ ಪಾರ್ಕ್ ಉಪವಿಭಾಗದ ACP ಮಂಜುನಾಥ್ ತಳವಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ವಿಧ್ವತ್ ಮೇಲೆ ಹಲ್ಲೆ ನಡೆಸಿದ ನಲಪಾಡ್ ಅವರನ್ನು ಮುಂದಿನ 8 ಗಂಟೆ ಒಳಗೆ ಬಂಧಿಸದಿದ್ದರೆ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುವುದಾಗಿ ಗೃಹಸಚಿವರು ಇಂದು ಮಧ್ಯಾನ ಹೇಳಿದ್ದರು. ರಾತ್ರಿಯಾದರೂ ಆರೋಪಿಯನ್ನು ಪತ್ತೆಹಚ್ಚಲು ವಿಫಲವಾದ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.