
ನವದೆಹಲಿ: ಬಿಜೆಪಿಯ ಚುನಾವಣಾ ಸಭೆಯೊಂದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಿದ್ದ ಬಗ್ಗೆ ತ್ರಿಪುರಾ ಸಿಪಿಎಂ ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗೃಹ ಸಚಿವ ರಜನಾಥ್ ಸಿಂಗ್‌ರ ಅಧಿಕೃತ ನಿವಾಸದಲ್ಲಿ ಜ.14ರಂದು ಸಭೆ ನಡೆದಿದ್ದು, ರಾಜಕೀಯ ಉದ್ದೇಶಕ್ಕಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಬಳಸಿಕೊಳ್ಳುವ ಮೂಲಕ ಚುನಾವಣಾ ನಿಯಮಗಳನ್ನು ಬಿಜೆಪಿ ಉಲ್ಲಂಘಿಸಿದೆ.
ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನ ಸಭೆ ಚುನಾವಣೆಗೆ ತಂತ್ರಗಾರಿಕೆ, ರಾಜಕೀಯ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಹೀಗಾಗಿ ಬಿಜೆಪಿ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.