ಹಾಸನದಲ್ಲಿ ಹುತಾತ್ಮ ಯೋಧನ ಪಾರ್ಥಿವ ಶರೀರ

Published : Feb 01, 2017, 03:13 AM ISTUpdated : Apr 11, 2018, 12:35 PM IST
ಹಾಸನದಲ್ಲಿ ಹುತಾತ್ಮ ಯೋಧನ ಪಾರ್ಥಿವ ಶರೀರ

ಸಾರಾಂಶ

ಕೊನೆಗೂ ಕನ್ನಡದ ವೀರ ಯೋಧ ಸಂದೀಪ್ ಪಾರ್ಥಿವ ಶರೀರ ತವರಿಗೆ ಆಗಮಿಸಿದೆ. ಯೋಧನ ಸಾವಿಗೆ ಜನ ಕಂಬನಿ ಮಿಡಿದಿದ್ದಾರೆ. ದೇಶಕ್ಕಾಗಿ ಪ್ರಾಣತೆತ್ತಿದ್ದಕ್ಕೆ  ನಮನ ಸಲ್ಲಿಸಿದರು. ಇಂದು ಹುಟ್ಟೂರು ದೇವಿರಹಳ್ಳೀಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಹಾಸನ(ಫೆ.01): ಕೊನೆಗೂ ಕನ್ನಡದ ವೀರ ಯೋಧ ಸಂದೀಪ್ ಪಾರ್ಥಿವ ಶರೀರ ತವರಿಗೆ ಆಗಮಿಸಿದೆ. ಯೋಧನ ಸಾವಿಗೆ ಜನ ಕಂಬನಿ ಮಿಡಿದಿದ್ದಾರೆ. ದೇಶಕ್ಕಾಗಿ ಪ್ರಾಣತೆತ್ತಿದ್ದಕ್ಕೆ  ನಮನ ಸಲ್ಲಿಸಿದರು. ಇಂದು ಹುಟ್ಟೂರು ದೇವಿರಹಳ್ಳೀಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಯೋಧ ಸಂದೀಪ್ ಮನೆಯಲ್ಲಿ ಶೋಕ ಸಾಗರ

ಜಮ್ಮುವಿನಲ್ಲಿ ಜನವರಿ 25ರಂದು ನಡೆದ ಹಿಮಪಾತ ದುರಂತದಲ್ಲಿ ಹುತಾತ್ಮರಾಗಿದ್ದ  ಹುತಾತ್ಮ ಯೋಧ ಸಂದೀಪ್ ಪಾರ್ಥಿವ ಶರೀರ ಹಾಸನ ತಲುಪಿದೆ. ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟ ಹುತಾತ್ಮ ಯೋಧನ ಪಾರ್ಥಿವ ಶರೀರ ತಡರಾತ್ರಿ 12.30ರ ಸುಮಾರಿಗೆ ಹಾಸನಕ್ಕೆ ಆಗಮಿಸಿತು.. ತಡರಾತ್ರಿ ಆಗಿದ್ದರಿಂದ ಹುತಾತ್ಮನ ಪಾರ್ಥಿವ ಶರೀರವನ್ನು ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿತ್ತು. ಬೆಳಗ್ಗೆ 8 ಗಂಟೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರು ಸೇರಿದಂತೆ ಸಾರ್ವಜನಿಕರು ಯೋಧನಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ಮಧ್ಯಾಹ್ನ ದೇವಿಹಳ್ಳಿಯಲ್ಲಿ ಅಂತ್ಯಸಂಸ್ಕಾರ

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ಹುಟ್ಟೂರು ದೇವಿಹಳ್ಳಿವರೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುವುದು.. ಸಂದೀಪ್ ಮನೆಯಲ್ಲಿ ಅಂತಿಮ ವಿಧಿವಿಧಾನ ಸಲ್ಲಿಸಿದ ಬಳಿಕ ಹಿಂದೂ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗೊಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.

ನಿನ್ನೆ ಡೆಲ್ಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಯೋಧನ ಪಾರ್ಥಿವ ಶರೀರ ತರಲಾಯ್ತು.. ಇನ್ನು ರಾಜ್ಯ ಸರ್ಕಾರದ ಪರವಾಗಿ ಸಚಿವ ಎ.ಮಂಜು, ಯೋಧನ ಕುಟುಂಬಕ್ಕೆ ೨೫ ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.. ಅಲ್ದೆ, ಕುಟುಂಬಕ್ಕೆ ಒಂದು ಸೈಟ್ ನೀಡುವ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ  ಮಧ್ಯಾಹ್ನ ಹುತಾತ್ಮ ಯೋಧನ ಅಂತ್ಯಸಂಸ್ಕಾರ ನಡೆಯಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೂಪಾಯಿ ಕುಸಿದರೂ ಪ್ರಗತಿಯತ್ತ ಭಾರತ: ನಿಜಕ್ಕೂ ಏನಾಗುತ್ತಿದೆ?‌
87 ವರ್ಷದ ಪ್ರಸಿದ್ಧ ಪೇಂಟರ್ ಮಗುವಿಗೆ ತಾಯಿಯಾದ 37 ವರ್ಷದ ಪತ್ನಿ, ಉಳಿದ ಮಕ್ಕಳೊಂದಿಗೆ ಬಂಧವೇ ಕಟ್