
ಲಂಡನ್(ಅ.14): ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಇತ್ತೀಚೆಗಷ್ಟೇ ನೈಟ್'ಕ್ಲಬ್ ಬಳಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಬಂಧನಗೊಳ್ಳಗಾಗಿದ್ದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್, ಪ್ರತಿಷ್ಠಿತ ಆ್ಯಷಸ್ ಸರಣಿ ತಂಡದಿಂದ ಹೊರಬಿದ್ದಿದ್ದರು. ಅಲ್ಲದೇ ಪ್ರಾಯೋಜಕತ್ವಕ್ಕೂ ಕುತ್ತು ಬಂದಿತ್ತು.
ಆದರೆ ಎಲ್ಲಾ ಕಹಿ ಘಟನೆಗಳನ್ನು ಬದಿಗೊತ್ತಿ ಸ್ಟೋಕ್ಸ್, ತಮ್ಮ ಪ್ರೇಯಸಿ ಕ್ಲೇರ್ ರಾಟ್'ಕ್ಲಿಫ್‌ರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ವೇಳೆ ಬಲಗೈನಲ್ಲಿ ಬ್ಯಾಂಡೇಜ್ ಸುತ್ತಿಕೊಂಡಿದ್ದು ಸಾಕಷ್ಟು ಗಮನ ಸೆಳ
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್, ಮಾಜಿ ನಾಯಕ ಅಲಸ್ಟೈರ್ ಕುಕ್, ವೇಗಿ ಸ್ಟುವರ್ಟ್ ಬ್ರಾಡ್ ವಿವಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.