
ಕಾರವಾರ (ಡಿ.11): ಹೊನ್ನಾವರದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಮುಂಡಗೋಡಿನಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಟೈಯರ್'ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕುಮಟಾದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಎರಡು ಪೋಲೀಸ್ ವಾಹನಗಳು ಜಖಂಗೊಂಡಿವೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾನಿರತರ ಮೇಲೆ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದು ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಪೋಲೀಸ್'ರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ವಲಯ ಐಜಿಪಿ ವಾಹನ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ ತಗುಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.