
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಕಲ್ಲೆಸೆತಗಾರರು, ಉದ್ರಿಕ್ತ ಗುಂಪುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಿಆರ್‌ಪಿಎಫ್ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ. ಪ್ರತಿಭಟನಕಾರರಲ್ಲಿ ಸಾಕಷ್ಟುಸಂಖ್ಯೆಯ ಮಹಿಳೆಯರೂ ತೊಡಗಿಸಿಕೊಳ್ಳುವುದರಿಂದ ಪರಿಸ್ಥಿತಿ ನಿಭಾಯಿಸಲು ಇದೇ ಮೊದಲ ಬಾರಿ ಸಿಆರ್‌ಪಿಎಫ್ 500 ಮಹಿಳಾ ಸಿಬ್ಬಂದಿಯನ್ನು ಕಾಶ್ಮೀರ ಕಣಿವೆಯ ಸೇವೆಗೆ ನಿಯೋಜಿಸಿಕೊಂಡಿದೆ.
ಕೆಲವು ವರ್ಷಗಳ ಹಿಂದೆ ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಮಹಿಳಾ ಸಿಬ್ಬಂದಿಯನ್ನು ಸಿಆರ್‌ಪಿಎಫ್ ಬಳಸಿಕೊಂಡಿತ್ತು. ಆದರೆ, ಕಾಶ್ಮೀರದಲ್ಲಿ ಪ್ರಪ್ರಥಮ ಬಾರಿ ಈ ಕ್ರಮ ಕೈಗೊಳ್ಳಲಾಗಿದೆ.
45 ದಿನಗಳ ತರಬೇತಿ ನಂತರ ಈ ಸಿಬ್ಬಂದಿಯನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.