
ನವದೆಹಲಿ (ಏ.13): ಶ್ರೀನಗರದಲ್ಲಿ ಲೋಕಸಭಾ ಚುನಾವಣೆ ಮತದಾನ ಮುಗಿಸಿ ಇವಿಎಂ ಮಷಿನ್ ಜೊತೆ ಬರುತ್ತಿದ್ದ ವೇಳೆ ಸಿಆರ್'ಪಿಎಫ್ ಯೋಧರ ಕೆಲ ಯುವಕರ ಗುಂಪು ಹಲ್ಲೆ ನಡೆಸಿರುವುದನ್ನು ಜಮ್ಮು ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಖಂಡಿಸಿದ್ದಾರೆ. ಈ ವೇಳೆ ಯೋಧರು ತೋರಿದ ತಾಳ್ಮೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಹಲ್ಲೆ ನಡೆಸಿರುವ ವಿಡಿಯೋವನ್ನು ನಾವು ನೋಡಿದ್ದೇವೆ. ಸಿಆರ್'ಪಿಎಫ್ ಯೋಧರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಲ್ಲಿ ಯೋಧರ ತಾಳ್ಮೆ ಗಮನಿಸಬೇಕಾದ ಅಂಶ. ನಮ್ಮ ಭದ್ರತಾ ಪಡೆಗಳು ಶಿಸ್ತಿನ ಸಿಪಾಯಿಗಳು. ಇಂತಹ ಘಟನೆಗಳನ್ನು ಯಾರೊಬ್ಬರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಕ್ರಿಕೆಟಿಗರಾದ ಗೌತಮ್ ಗಂಭೀರ್, ವೀರೇಂದ್ರ ಸೆಹ್ವಾಗ್ ಸಿಆರ್ ಪಿಎಫ್ ಯೋಧರ ಬೆಂಬಲಕ್ಕೆ ನಿಂತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.