ಜೆಡಿಎಸ್‌, ಕಾಂಗ್ರೆಸ್‌ನ ಎಲ್ಲಾ ಶಾಸಕರಿಗೆ ಬಿಜೆಪಿಗೆ ಆಹ್ವಾನ!

Published : Jul 23, 2019, 08:52 AM IST
ಜೆಡಿಎಸ್‌, ಕಾಂಗ್ರೆಸ್‌ನ ಎಲ್ಲಾ ಶಾಸಕರಿಗೆ ಬಿಜೆಪಿಗೆ ಆಹ್ವಾನ!

ಸಾರಾಂಶ

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಎಲ್ಲಾ ಶಾಸಕರಿಗೆ ಬಿಜೆಪಿಯಿಂದ ಆಹ್ವಾನ ನೀಡಲಾಗಿದೆ.

ಬೆಂಗಳೂರು [ಜು.23] :  ಅತೃಪ್ತ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪ ಮಾಡುತ್ತಿದ್ದೀರಿ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಬಹಿರಂಗ ಆಹ್ವಾನ ನೀಡುತ್ತಿದ್ದೇನೆ. ಎಲ್ಲಾ ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಬಿಜೆಪಿ ಸದಸ್ಯತ್ವ ಪಡೆಯಿರಿ. ಯೋಗ್ಯತೆಗೆ ಅನುಗುಣವಾಗಿ ಜವಾಬ್ದಾರಿಗಳನ್ನು ನೀಡುತ್ತೇವೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮೈತ್ರಿಕೂಟದ ಶಾಸಕರು ಆರೋಪ ಮಾಡುತ್ತಿದ್ದಾರೆ. ನಾನು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದೇನೆ. ರಾಷ್ಟ್ರೀಯ ಸದಸ್ಯತ್ವ ಅಭಿಯಾನದ ಪ್ರಮುಖ ಜವಾಬ್ದಾರಿಯಲ್ಲೂ ಇದ್ದೇನೆ. ನಿಮ್ಮಲ್ಲಿ ಯಾರಾರ‍ಯರು ಬಿಜೆಪಿಗೆ ಸೇರ್ಪಡೆ ಆಗುತ್ತೀರೋ ಮುಕ್ತ ಅವಕಾಶವಿದೆ ಎಂದು ಆಹ್ವಾನ ನೀಡಿದರು.

ಬಿಜೆಪಿ ಸದಸ್ಯತ್ವ ಪಡೆದರೆ ಯೋಗ್ಯತೆಗೆ ತಕ್ಕಂತೆ ಜವಾಬ್ದಾರಿ ನೀಡಲಾಗುವುದು. ನಾವು ಜವಾಬ್ದಾರಿ, ಅಧಿಕಾರ ನೀಡಬಹುದೇ ಹೊರತು ಮಾನ ನೀಡಲು ಆಗುವುದಿಲ್ಲ. ಅದನ್ನು ನೀವೇ ಗಳಿಸಬೇಕು ಎಂದು ಹೇಳಿದರು.

ಈ ವೇಳೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ, ನಾವು ಬಿಜೆಪಿ ಸೇರಿದರೆ ಏನು ಕೊಡುತ್ತೀರಿ ಎಂಬುದು ಬೇಡ. ಮುಂಬೈನಲ್ಲಿರುವ ಶಾಸಕರಿಗೆ ಏನು ಕೊಡುತ್ತೀರೆಂದು ಹೇಳಿದ್ದೀರಿ ಎಂಬುದನ್ನು ಮೊದಲು ಬಹಿರಂಗಗೊಳಿಸಿ ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರವಿ, ಕೆಲವನ್ನು ಬಹಿರಂಗವಾಗಿ ಮಾತನಾಡಲು ಆಗುವುದಿಲ್ಲ. ನೀವು ಬರುವುದಾದರೆ ಹೇಳಿ, ನಿಮ್ಮ ಹತ್ತಿರ ಖಾಸಗಿಯಾಗಿ ಮಾತನಾಡುತ್ತೇವೆ. ಏಳು ಮಂದಿ ಜೆಡಿಎಸ್‌ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತದಾನ ಮಾಡಿದಾಗ ನಾವು ಈ ರೀತಿ ಕೇಳಲಿಲ್ಲ. 2006ರಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆಸಿಕೊಂಡಾಗ ಏನು ಕೊಟ್ಟಿರಿ ಎಂದು ಕೇಳಿರಲಿಲ್ಲ ಎಂದು ಕಾಲೆಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!
ಬೆಂಗಳೂರಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ!