
ಚಿಕ್ಕಮಗಳೂರು (ಫೆ.09): ಸಖರಾಯಪಟ್ಟಣ ಹಾಗೂ ಜಿಗಣೆಹಳ್ಳಿ ನಡುವೆ ನೀರಿಗಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ವಿಫರಾಗಿದ್ದು ಲಾಠಿ ಚಾರ್ಜ್ ಮಾಡಿದ್ದಾರೆ. ಸಖರಾಯಪಟ್ಟಣದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಒಂದು ಊರಿಗೆ ನೀರು ಹರಿಸಿದ್ದಕ್ಕಾಗಿ ಮತ್ತೊಂದು ಊರಿನವರು ಗಲಾಟೆ ಮಾಡಿದ್ದಾರೆ.
ಸಖರಾಯಪಟ್ಟಣದ ಅಯ್ಯನ್ ಕೆರೆಯಿಂದ ಕಡೂರು ಭಾಗದ ಪ್ರದೇಶಗಳಿಗೆ ಮೊನ್ನೆ, ನಿನ್ನೆ ನೀರು ಹರಿಸಲಾಗಿತ್ತು. ಇದಕ್ಕೆ ತಕರಾರು ತೆಗದು ಸಖರಾಯಪಟ್ಟಣದ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಕೆರೆಯಲ್ಲಿ ನಾಲ್ಕೈದು ಅಡಿ ನೀರು ಮಾತ್ರ ಇದೆ. ನಮಗೆ ಕುಡಿಯುವ ನೀರಿನ ಕೊರತೆಯಾಗುತ್ತದೆ. ನೀರು ಬಿಡಬೇಡಿ ಎಂದು ಡಿಸಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಸ್ಪಂದಿಸದ ಕಾರಣ ಸಖರಾಯಪಟ್ಟಣ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಹಾಗಾಗಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.