ಈ ವಾರ ರಾಜ್ಯಾದ್ಯಂತ ಮಳೆ: KSNDMC ಮುನ್ಸೂಚನೆ

Published : Oct 15, 2018, 08:29 AM IST
ಈ ವಾರ ರಾಜ್ಯಾದ್ಯಂತ ಮಳೆ: KSNDMC ಮುನ್ಸೂಚನೆ

ಸಾರಾಂಶ

 ರಾಜ್ಯದ ಕೆಲ ಭಾಗದಲ್ಲಿ ಈ ವಾರ ಮಳೆ ಸಾಧ್ಯತೆ. ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, [ಅ.15]: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅ. 19ರ ವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಕಳೆದ ವಾರ ರಾಜ್ಯದ ಕೆಲ ಭಾಗದಲ್ಲಿ ಮಳೆಯಾಗಿತ್ತು. ವಾಯುಭಾರದ ಕುಸಿತ ಪ್ರಭಾವ ಕಡಿಮೆಯಾಗುತ್ತಿದ್ದಂತೆ ಮಳೆ ಪ್ರಮಾಣ ಕಡಿಮೆಯಾಗಿತ್ತು.

ಇದೀಗ ಮತ್ತೆ ಅರಬ್ಬಿ ಮತ್ತು ಬಂಗಾಳಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BLO Death: ಆಸ್ಪತ್ರೆಗೆ ತಲುಪುವಷ್ಟರಲ್ಲೇ ನಿಂತಿತು ಉಸಿರು! ಎಸ್‌ಐಆರ್ ಸಭೆ ಬೆನ್ನಲ್ಲೇ ಬಿಎಲ್‌ಒ ರತ್ನಮ್ಮ ಸಾವು; ಅಸಲಿ ಕಾರಣ ಏನು ಗೊತ್ತಾ?
Oil Crisis: ತೈಲ ಬಿಕ್ಕಟ್ಟಿನ ನಡುವೆ ಭಾರತದ 3 ಬಿಗ್ ಗೇಮ್ ಪ್ಲಾನ್: ಜಾಗತಿಕ ಮಾರ್ಕೆಟ್ ಕಿಂಗ್ ಆದ ಭಾರತ! 2030ರ ವೇಳೆಗೆ ಜಗತ್ತೇ ದಿಲ್ಲಿಯ ಮುಂದೆ ಕೈಚಾಚಲಿದೆ!