ಬಂಗಾಳ ಕೊಲ್ಲಿಯಲ್ಲಿ ಓಕ್ಲಿ ಸೈಕ್ಲೋನ್; 2 ದಿನ ಬೆಂಗಳೂರಿನಲ್ಲಿ ತುಂತುರು ಮಳೆ ಸಾಧ್ಯತೆ

By Suvarna Web DeskFirst Published Nov 30, 2017, 5:25 PM IST
Highlights

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ. 'ಓಕ್ಲಿ' ಹೆಸರಿನ ಚಂಡಮಾರುತ ಬೀಸುತ್ತಿರುವ ಹಿನ್ನಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು (ನ.30): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು  ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ. 'ಓಕ್ಲಿ' ಹೆಸರಿನ ಚಂಡಮಾರುತ ಬೀಸುತ್ತಿರುವ ಹಿನ್ನಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕನ್ಯಾಕುಮಾರಿಯಲ್ಲಿ  60  ಕಿಲೋಮೀಟರ್ ಅಂತರದಲ್ಲಿ ಚಂಡಮಾರುತ ಬೀಸುತ್ತಿದ್ದು,  ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ.

ಪೂರ್ವದಿಂದ ಪಶ್ಚಿಮಕ್ಕೆ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು,  ನಾಳೆ ಸೈಕ್ಲೋನ್ ಮಳೆ ಬೀಳುವ ಸಾಧ್ಯತೆಯಿದೆ.  ಆದರೆ ಕರ್ನಾಟಕಕ್ಕೆ ಸೈಕ್ಲೋನ್ ಎಫೆಕ್ಟ್ ಇರುವುದಿಲ್ಲ.  ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಎಂದು ಸುವರ್ಣನ್ಯೂಸ್ ಗೆ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಮ್ ಮೇತ್ರಿ ಹೇಳಿದ್ದಾರೆ. ಸೈಕ್ಲೋನ್'ನಿಂದಾಗಿ ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

 

 

click me!