
ಭುವನೇಶ್ವರ (ಅ. 11): ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ತಿತಿಲಿ’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗುರುವಾರ ಮುಂಜಾನೆ 5.30ರ ವೇಳೆಗೆ ಒಡಿಶಾ ಕರಾವಳಿಗೆ ಅಪ್ಪಳಿಸಿದೆ.
ಗಂಟೆಗೆ 140ರಿಂದ 150 ಕಿ.ಮೀ. ವೇಗದ ಗಾಳಿ ಹಾಗೂ ಧಾರಾಕಾರ ಮಳೆಯೊಂದಿಗೆ ಈ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳ ಎತ್ತರ ಒಂದು ಮೀಟರ್‌ಗಿಂತ ಹೆಚ್ಚಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಕರಾವಳಿಯ ಐದು ಜಿಲ್ಲೆಗಳಲ್ಲಿ ತಗ್ಗುಪ್ರದೇಶಗಳ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಗಂಜಾಂ ಜಿಲ್ಲೆಯ ಗೋಪಾಲಪುರ ಪ್ರದೇಶಕ್ಕೆ ಗುರುವಾರ ಮುಂಜಾನೆ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ವಿದ್ಯಾರ್ಥಿ ಸಂಘದ ಚುನಾವಣೆಯನ್ನು ರದ್ದುಪಡಿಸಲಾಗಿದೆ.
ಚಂಡಮಾರುತದ ಪ್ರಭಾವದ ಹಿನ್ನೆಲೆಯಲ್ಲಿ ಬುಧವಾರವೇ ಒಡಿಶಾ ಕರಾವಳಿಯ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಗುರುವಾರದವರೆಗೆ ಭಾರಿಯಿಂದ ಭಾರಿ ಪ್ರಮಾಣದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.