
ಗಾಂಧೀನಗರ[ಜೂ.13]: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿದ್ದ ಚಂಡಮಾರುತ 'ವಾಯು' ತನ್ನ ಪಥ ಬದಲಿಸಿದ್ದು, ಗುಜರಾತ್ ಕರಾವಳಿಗೆ ಅಪ್ಪಳಿಸುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೂ ಗುಜರಾತ್ ಸೇರಿದಂತೆ ದೇಶದ ಪಶ್ಚಿಮ ಕರಾವಳಿಯುದ್ದಕ್ಕೂ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 155 ರಿಂದ 165 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಕಟ್ಟೆಚ್ಚರ ವಹಿಸಲಾಗಿದೆ.
ಕರಾವಳಿಯಲ್ಲಿ ಭಾರಿ ಮಳೆ : ತುಂಬಿದ ನೇತ್ರಾವತಿಯ ಒಡಲು
ಗುಜರಾತ್ ನ ಪೋರಬಂದರು, ಮಹುವಾ ಹಾಗೂ ಇತರ ಭಾಗದಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದ್ದು, 2.30 ಲಕ್ಷ ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ಭಾರತೀಯ ಕರಾವಳಿ ಕಾವಲು ಪಡೆ, ನೌಕಾ ಪಡೆ, ಭೂ ಸೇನೆ ಮತ್ತು ವಾಯು ಪಡೆ ರಕ್ಷಣಾ ಕಾರ್ಯಕ್ಕೆ ನೆರವಾಗಲು ಸನ್ನದ್ಧವಾಗಿದೆ.
ವಾಯು ಚಂಡಮಾರುತದ ಪರಿಣಾಮ ರಾಜ್ಯದ ಮಂಗಳೂರು, ಉಡುಪಿ, ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಹಾರಾಷ್ಟ್ರ, ಕರ್ನಾಟಕ ಸಮುದ್ರ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.