ಚಂಡಮಾರುತ : 2 ದಿನ ಕರಾವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

Published : Jun 12, 2019, 11:58 AM ISTUpdated : Jun 13, 2019, 08:56 AM IST
ಚಂಡಮಾರುತ : 2 ದಿನ ಕರಾವಳಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಸಾರಾಂಶ

ವಾಯು  ಚಂಡಮಾರುತ ಅಪ್ಪಳಿಸುತ್ತಿದ್ದು, ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಹೆಚ್ಚಿನ ಮಳೆ ಗಾಳಿ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನವದೆಹಲಿ:   ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತದ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ‘ವಾಯು’ ಎಂದು ನಾಮಕರಣ ಮಾಡಲಾಗಿದ್ದು, ಗುರುವಾರ ಬೆಳಗ್ಗೆ ಗುಜರಾತ್‌ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ. 

 ಗುಜರಾತಿನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ಸಾರಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರವುಗೊಳಿಸಲು ಸರ್ಕಾರ ಮುಂದಾಗಿದೆ. ಅಲ್ಲದೇ ಕೇಂದ್ರದಿಂದ ಅಗತ್ಯ ನೆರವು ನೀಡಲಾಗುತ್ತಿದ್ದು, ರಕ್ಷಣಾ ತಂಡಗಳು ಸಕಲ ಉಪಕರಣಗಳೊಂದಿಗೆ ಆಗಮಿಸಿದ್ದಾರೆ. 

ಇನ್ನು ಭಾರೀ ಪ್ರಮಾಣದಲ್ಲಿ ಚಂಡಮಾರುತ ಅಪ್ಪಳಿಸುವ  ಮುನ್ನೆಚ್ಚರಿಕಾ ಕ್ರಮವಾಗಿ 2 ದಿನ ಬುಧವಾರ ಹಾಗೂ ಗುರುವಾರ ಕರಾವಳಿ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಂಡಮಾರುತ ಪ್ರಭಾವದಿಂದ  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಇನ್ನೂ  3 ದಿನ ಭಾರೀ ಮಳೆ ಗಾಳಿ ಬೀಸಲಿದೆ. ಆದರೆ ಕೊಡಗು ಜಿಲ್ಲೆಗೆ ಇದರಿಂದ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಈ ರೈಲಿನಲ್ಲಿ ಊಟಕ್ಕೆ ದುಡ್ಡೇ ಬೇಡ! ಇದು ಉಚಿತ ಊಟ ನೀಡುವ ದೇಶದ ಏಕೈಕ ರೈಲು, ನೀವು ಪ್ರಯಾಣಿಸಿದ್ದೀರಾ?
ಮನ್ರೆಗಾ ಹೆಸರು ಬದಲಿಸಲು ಇಚ್ಛಿಸಿದ ಮೋದಿ ಸರ್ಕಾರ, ಇನ್ಮುಂದೆ ಇದು VBGRAMG!