
ಮಂಡ್ಯ (ಮಾ. 09): ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಚುನಾವಣಾ ಅಖಾಡಕ್ಕೆ ಟ್ರಬಲ್ ಶೂಟರ್ ಡಿಕೆಶಿ ಎಂಟ್ರಿಯಾಗಿದ್ದಾರೆ.
ಲೋಕಸಭಾ ಚುನಾವಣೆ : ಚಿತ್ರದುರ್ಗ ಬಿಜೆಪಿ ಅಭ್ಯರ್ಥಿಯಾಗಲಿದ್ದಾರಾ ಈ ನಾಯಕ..?
ಸುಮಲತಾ ಅಂಬರೀಶ್ ಜೊತೆಗೆ ಗುರುತಿಸಿಕೊಂಡಿರುವ ಅತೃಪ್ತ ಕಾಂಗ್ರೆಸ್ಸಿಗರನ್ನು ಕಟ್ಟಿ ಹಾಕಲು ಡಿಕೆಶಿ ಮುಂದಾಗಿದ್ದಾರೆ.
ನಾಳೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ಸಿಗರ ಸಭೆ ಕರೆದಿದ್ದಾರೆ ಡಿಕೆಶಿ. ಔತಣ ಕೂಟದ ಹೆಸರಲ್ಲಿ ಬೆಂಗಳೂರಿನಲ್ಲಿ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ : ಇವರೆಲ್ಲರಿಗೂ ಬಿಜೆಪಿ ಟಿಕೆಟ್ ಖಚಿತ
ಈಗಾಗಲೇ ಸುಮಲತಾಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೂ ಕೆಲ ಕಾಂಗ್ರೆಸ್ಸಿಗರು ಸುಮಾಲತಾ ಜೊತೆಗೆ ಗುರುತಿಸಿಕೊಂಡಿದ್ದಾರೆ. ಸಿಎಂ ಕುಮಾರಸ್ವಾಮಿ ಒತ್ತಾಯದ ಮೇರೆಗೆ ಮಂಡ್ಯ ಚುನಾವಣಾ ಅಖಾಡಕ್ಕಿಳಿದಿದ್ದಾರೆ ಡಿಕೆಶಿ.
ಅತೃಪ್ತ ನಾಯಕರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇ ಗೌಡ, ಕೆ.ಬಿ.ಚಂದ್ರಶೇಖರ್ ಮನವೊಲಿಕೆಗೆ ಡಿಕೆಶಿ ಕಸರತ್ತು ನಡೆಸುತ್ತಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.