ಡಿ.ರೂಪಾ ವಿರುದ್ಧ 20 ಕೋಟಿ ರು. ಮಾನನಷ್ಟ ಮೊಕದ್ದಮೆ : ವಿಚಾರಣೆ ಎದುರಿಸಲು ಸಿದ್ಧ

By Suvarna Web DeskFirst Published Dec 17, 2017, 10:49 AM IST
Highlights

ರಸ್ತೆ ಸುರಕ್ಷತೆ ಮತ್ತು ಸಾರಿಗೆ ವಿಭಾಗದ ಆಯುಕ್ತೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಡಿ. ರೂಪಾ ವಿರುದ್ಧ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ದಾಖಲಿಸಿರುವ ಮಾನ ನಷ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ 18ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಕಾಲತ್ತು ಸಲ್ಲಿಸಲಾಗಿದೆ.

ಬೆಂಗಳೂರು (ಡಿ.17): ರಸ್ತೆ ಸುರಕ್ಷತೆ ಮತ್ತು ಸಾರಿಗೆ ವಿಭಾಗದ ಆಯುಕ್ತೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಡಿ. ರೂಪಾ ವಿರುದ್ಧ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ದಾಖಲಿಸಿರುವ ಮಾನ ನಷ್ಟಪ್ರಕರಣಕ್ಕೆ ಸಂಬಂಧಪಟ್ಟಂತೆ 18ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಕಾಲತ್ತು ಸಲ್ಲಿಸಲಾಗಿದೆ. ಪ್ರಕರಣ ಸಂಬಂಧ ಶನಿವಾರ ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆ.16ಕ್ಕೆ ಮುಂದೂಡಿದೆ.

ರೂಪಾ ಅವರ ಪರವಾಗಿ ವಕೀಲರು ವಕಾಲತ್ತು ಸಲ್ಲಿಕೆ ಮಾಡಿದ್ದು, ವಿಚಾರಣೆ ಎದುರಿಸಲು ತೀರ್ಮಾನಿಸಿದ್ದಾರೆ. ಬಂಧಿಖಾನೆ ಇಲಾಖೆಯ ಡಿಐಜಿಯಾಗಿದ್ದ ಡಿ.ರೂಪಾ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ ಅಕ್ರಮಗಳನ್ನು ಕಳೆದ ಜುಲೈ ತಿಂಗಳಲ್ಲಿ ಬಯಲಿಗೆಳೆದಿದ್ದರು. ಅಲ್ಲದೇ, ಬಂಧಿತರಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಡಿಜಿಪಿಯಾಗಿದ್ದ ಸತ್ಯನಾರಾಯಣ ರಾವ್ ಎರಡು ಕೋಟಿ ರು. ಲಂಚ ಪಡೆದಿದ್ದರು ಎಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ 20 ಕೋಟಿ ರು. ಮಾನನಷ್ಟ ಮೊಕದ್ದಮೆಯನ್ನು ಸತ್ಯನಾರಾಯಣರಾವ್ ದಾಖಲಿಸಿದ್ದರು.

click me!