
ಚಿಂತಾಮಣಿ: ದಲಿತರು ನೀಡುವ ಹಾಲು ಸ್ವೀಕರಿಸದೆ ಹಾಲು ಉತ್ಪಾದಕರ ಕೇಂದ್ರದವರು ಅಸ್ಪಶ್ಯತೆ ಆಚರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಎ.ಗುಟ್ಟಹಳ್ಳಿಯ ದಲಿತ ಕಾಲೋನಿ ನಿವಾಸಿಗಳು ಸೋಮವಾರ ಚಿಂತಾಮಣಿ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.
ಗ್ರಾಮದಲ್ಲಿರುವ ಹಾಲು ಉತ್ಪಾದಕರ ಕೇಂದ್ರಕ್ಕೆ ದಲಿತರು ಹಾಲು ಸರಬರಾಜು ಮಾಡಿದರೆ ಅದನ್ನು ಸ್ವೀಕರಿಸುತ್ತಿಲ್ಲ. ಈ ಮೂಲಕ ದಲಿತ ವಿರೋಧಿ ನೀತಿ ಅನುಸರಿಸಲಾಗುತ್ತಿದೆಂದು ಕೃಷ್ಣಾರೆಡ್ಡಿ, ಜಿ.ವಿ.ನಾಗರಾಜ್, ವೆಂಕಟಸ್ವಾಮಿ ಮತ್ತಿತರರು ಪೊಲೀಸರಿಗೆ ದೂರು ನೀಡಿದ್ದಾರೆ.
ಗ್ರಾಮದ ದಲಿತರ ನೀಡುವ ಹಾಲನ್ನು ಸ್ವೀಕರಸದೆ ಇರುವ ಬಗ್ಗೆ ಕಳೆದ ಹಲವು ತಿಂಗಳುಗಳಿಂದ ನ್ಯಾಯ ಪಂಚಾಯಿತಿ ನಡೆದರೂ ಸಹ ಎರಡು ಗುಂಪುಗಳು ನಡುವಿನ ಭಿನ್ನಾಭಿಪ್ರಾಯದಿಂದ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.