
ಲಕ್ನೋ(ಅ.5): ಇಲ್ಲಿನ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾನಿಲಯದಲ್ಲಿ ದಲಿತ ವಿದ್ಯಾರ್ಥಿಗಳು, ಸವರ್ಣೀಯ ಸಹಪಾಠಿಗಳಿಗೆ ಪೂಜೆ ಮಾಡಲು ನಿರಾಕರಿಸಿದ್ದಕ್ಕೆ, ವಿದ್ಯಾರ್ಥಿಗಳು ಹಾಸ್ಟೆಲ್ ತೊರೆದ ಘಟನೆ ನಡೆದಿದೆ.
ವಿವಿಯ ಸಿದ್ಧಾರ್ಥ ಹಾಸ್ಟೆಲ್ ನಲ್ಲಿ ದಲಿತ ವಿದ್ಯಾರ್ಥಿಗಳು ತಮಗೆ ಪೂಜೆ ಮಾಡಲು ಬಿಡುತ್ತಿಲ್ಲ ಎಂದು ಸವರ್ಣೀಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಲ್ಲದೇ ಸಿದ್ಧಾರ್ಥ ಹಾಸ್ಟೆಲ್ ನಲ್ಲಿ ಕೇವಲ ದಲಿತ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುವಂತೆಯೂ ಒತ್ತಾಯಿಸಲಾಗುತ್ತಿದೆ ಎನ್ನಲಾಗಿದೆ.
ಇದೇ ವೇಳೆ ಈ ಕುರಿತು ಹಲವು ಬಾರಿ ದೂರು ನೀಡಿದರೂ, ವಿವಿ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸವರ್ಣೀಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿವಿ ಕ್ಯಾಂಪಸ್ ಗಳು, ಹಾಸ್ಟೆಲ್ ಗಳಲ್ಲಿ ತಾರತಮ್ಯ ನೀತಿ ಅನುಸರಿಸುವುದು ಯಾವ ನ್ಯಾಯ ಎಂಬುದು ಈ ವಿದ್ಯಾರ್ಥಿಗಳು ಕೇಳುತ್ತಿರುವ ಪ್ರಶ್ನೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.