
ಚಿಕ್ಕಮಗಳೂರು (ಜ.16): ಸ್ಮಶಾನ ಜಾಗದಲ್ಲಿ ಶವಸಂಸ್ಕಾರಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಆಕ್ರೋಶಗೊಂಡ ದಲಿತರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶವವಿಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗಡಬನಹಳ್ಳಿ ಗ್ರಾಮದ ದಲಿತರಿಗೆ ಶವಸಂಸ್ಕಾರಕ್ಕೆ ಅದೇ ಊರಿನ ಅನ್ಯ ವರ್ಗದ ಜನ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಜನ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೃತ ಹುಚ್ಚಮ್ಮ ಶವವಿಟ್ಟು ಪ್ರತಿಭಟಿಸಿದ್ದಾರೆ.
ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಸ್ಮಶಾನ ಜಾಗವನ್ನು ಬಿಟ್ಟು ಕೊಡುವಂತೆ ದಲಿತರು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.