
ಬೆಂಗಳೂರು(ಅ.24): ವಿಧಾನಸೌಧದ ವಜ್ರ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ವಿವಾದಗಳ ನಡುವೆಯೇ ವಿಧಾನಸೌಧದ ವಜ್ರ ಮಹೋತ್ಸವದ ಭಾಗವಾಗಿ ಬೆಳಗ್ಗೆ 11ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಧಾನಮಂಡಲದ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬೆಳಗ್ಗೆ 11 ಗಂಟೆ ವೇಳೆಗೆ ರಾಜಭವನದಿಂದ ವಿಧಾನಸೌಧದವರೆಗೆ ವಿಶೇಷ ಮೆರವಣಿಗೆಯಲ್ಲಿ ರಾಷ್ಟ್ರಪತಿ ಕೋವಿಂದ್ ಆಗಮಿಸಲಿದ್ದಾರೆ. ರಾಜಭವನದಿಂದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆವರೆಗೆ ರಾಷ್ಟ್ರಪತಿಗಳಿಗೆ ಅಶ್ವಾರೂಢ ಪಡೆ ಬೆಂಗಾವಲಾಗಿರಲಿದೆ. ರಾಷ್ಟ್ರಪತಿಗಳೊಂದಿಗೆ ಸ್ಪೀಕರ್ ಕೆ.ಬಿ. ಕೋಳಿವಾಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಎಲ್ಲ ಸಚಿವರು ಸಾಥ್ ನೀಡಲಿದ್ದಾರೆ. ಒಂದೆಡೆ ವಿಶೇಷ ಅಧಿವೇಶನಕ್ಕೆ ವಿಧಾನಸಭೆ ಸಭಾಂಗಣದಲ್ಲಿ ತಯಾರಿ ನಡೆದಿದ್ದರೆ, ಮತ್ತೊಂದೆಡೆ ವಜ್ರ ಮಹೋತ್ಸವಕ್ಕಾಗಿ ವಿಧಾನಸೌದದ ಕಟ್ಟಡ, ಬೃಹತ್ ಮೆಟ್ಟಿಲು, ಬ್ಯಾಂಕ್ವೆಟ್ ಹಾಲ್ ಗಳಲ್ಲೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ವಜ್ರ ಮಹೋತ್ಸವ ಅಂಗವಾಗಿ ಮಧ್ಯಾಹ್ನ ಊಟದ ಬಳಿಕ 3 ಸಾಕ್ಷ್ಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಮಾಸ್ಟರ್ ಕಿಶನ್ ನಿರ್ದೇಶನದ 3ಡಿ ವರ್ಚುಯಲ್ ರಿಯಾಲಿಟಿ ವಿಡಿಯೋ ಪ್ರದರ್ಶನ ಇಂದು ಮಧ್ಯಾಹ್ನ 3 ಗಂಟೆಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.